ಅಂತರಾಷ್ಟ್ರೀಯ

ಕರ್ನಾಟಕ ಜ್ವಾಲೆ ಬ್ರೆಕೀಂಗ್ ನ್ಯೂಸ್ : ಉಚಿತ ಅಕ್ಕಿ, ಅಡುಗೆ ಅನಿಲ; ಬಡವರಿಗೆ ಬಂಪರ್ ಆಫರ್ ನೀಡಿದ ಕೇಂದ್ರ

ಲಾಕ್​​ಡೌನ್​ನಿಂದ ಉಂಟಾದ ನಷ್ಟವನ್ನು ತುಂಬಿಕೊಡಲು ಪ್ರಧಾನಿ ನರೇಂದ್ರ ಮೋದಿ ಅವರು 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇಂದು ಈ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್​ ಯಾವ ಯಾವ ಕ್ಷೇತ್ರಗಳಿಗೆ ಎಷ್ಟೆಷ್ಟು ಮತ್ತು ಹೇಗೆ ಹಂಚಿಕೆ ಮಾಡಲಾಗಿದೆ ಎಂಬ ವಿವರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು. 20 ಲಕ್ಷ ಕೋಟಿ ಆರ್ಥಿಕ ಪ್ಯಾಕೆಜ್​ನಲ್ಲಿ ಬಡವರಿಗೆ ಕೇಂದ್ರ ಸರ್ಕಾರ ಬಂಪರ್​ ಆಫರ್​ ನೀಡಿದೆ

ಮುಂದಿನ ಮೂರು ತಿಂಗಳುಗಳ ಕಾಲ ಭಾರತದಲ್ಲಿರುವ 80 ಕೋಟಿ ಜನರಿಗೆ ಐದು ಕೆಜಿ ಅಕ್ಕಿ ಅಥವಾ ಗೋಧಿ ಉಚಿತವಾ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ. ಈ ಯೋಜನೆಯಿಂದ ತುತ್ತು ಕೂಳಿಗೂ ಸಂಕಷ್ಟ ಪಡುತ್ತಿದ್ದ ಬಡವರು ನಿಟ್ಟುಸಿರು ಬಿಡುವಂತಾಗಿದೆ.

ಮುಂದಿನ ಮೂರು ತಿಂಗಳ ಕಾಲ 8 ಕೋಟಿ ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಅಲ್ಲದೆ, ಎಲ್ಲ ಕುಟುಂಬದವರಿಗೆ ಮೂರು ತಿಂಗಳ ಕಾಲ ಒಂದು ಕೆಜಿ ಧವಸ-ಧಾನ್ಯ ಉಚಿತವಾಗಿ ನೀಡುವುದಾಗಿ ಸರ್ಕಾರ ತಿಳಿಸಿದೆ.

ಮುಂದಿನ ಮೂರು ತಿಂಗಳ ಕಾಲ ಜನ ಧನ ಖಾತೆ ಹೊಂದಿರುವ ಮಹಿಳೆಯರಿಗೆ ಪ್ರತಿ ತಿಂಗಳು 500 ರೂಪಾಯಿ ಜಮಾ ಆಗಲಿದೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close