ಕರ್ನಾಟಕ ಸುದ್ದಿ

‘ಎಂಪಿಎಂಸಿ ಕಾಯ್ದೆಗೆ ತಿದ್ದುಪಡಿ ಕೈಬಿಡಿ, ಇಲ್ಲವಾದರೆ ಹೋರಾಟ ಎದುರಿಸಿ’ – ಸರ್ಕಾರಕ್ಕೆ ಎಚ್​​ಡಿಕೆ ಎಚ್ಚರಿಕೆ

Source :NS18

ಇನ್ನೊಂದೆಡೆ ಮನೆ ಬಾಗಿಲಲ್ಲಿ ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಅವಕಾಶ ಮಾಡಿಕೊಡುತ್ತೇವೆ ಎಂದು ನಂಬಿಸಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡುವ ನಿರ್ಧಾರದಿಂದ ಸರ್ಕಾರ ಹಿಂಸರಿಯಬೇಕು. ಜತೆಗೆ ರೈತರನ್ನು ಗುಲಾಮರನ್ನಾಗಿ ಮಾಡುವ ಕಾಯ್ದೆ ಯಾವುದೇ ಕಾರಣಕ್ಕೂ ತರಬಾರದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪಿಎಂ,ಸಿಎಂಗೆ ಮನವಿ ಸಲ್ಲಿಸಿ ಒತ್ತಾಯಿಸುತ್ತಿವೆ.

ಬೆಂಗಳೂರು(ಮೇ.14): “ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ. ರೈತರ ಬದುಕನ್ನು ಅಭದ್ರಗೊಳಿಸುವ, ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು. ಇದು ಕಡೇ ಎಚ್ಚರಿಕೆ, ಇಲ್ಲವಾದರೆ ಹೋರಾಟ ಎದುರಿಸಬೇಕಾಗುತ್ತದೆ” ಎಂದು ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರುವ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ, ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮನ್ನು ಒಪ್ಪಿಸಿಕೊಳ್ಳುವುದು ಅಪಾಯಕಾರಿ. ಅಭದ್ರತೆಯ ಈ ವ್ಯವಸ್ಥೆಗೆ ಕೃಷಿ, ರೈತರನ್ನು ಒಳಪಡಿಸುವುದು ನಮ್ಮ ಬೆನ್ನೆಲುಬನ್ನೇ ಮುರಿದಂತೆ. 20 ಲಕ್ಷ ಕೋಟಿ ರೂ ಪ್ಯಾಕೇಜ್ ವೇಳೆ ಸ್ಥಳೀಕರಣದ ಬಗ್ಗೆ ಮೋದಿ ಮಾತನಾಡಿದ್ದರು. ಆದರೆ ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರನ್ನು ಒಪ್ಪಿಸುವುದು ಯಾವ ಸ್ಥಳೀಕರಣ? ಎಂದು ಪ್ರಶ್ನಿಸಿದ್ಧಾರೆ ಎಚ್​​ಡಿಕೆ.

ರೈತ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಒಂದು ವೇಳೆ ವಂಚನೆಗೊಳಗಾದರೆ ಎಪಿಎಂಸಿ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳಲು ಅವಕಾಶವಿದೆ. ಆದರೆ, ಬಹುರಾಷ್ಟ್ರೀಯ ಕಂಪನಿಗಳು ಮಾಡುವ ವಂಚನೆಗಳ ವಿರುದ್ಧ ನಮ್ಮ ರೈತರು ಹೋರಾಡಬಲ್ಲರೇ? ಅವರ ಕೂಟ ವ್ಯವಸ್ಥೆಯ ಎದುರು ಸೆಣಸಬಲ್ಲರೇ? ಕೃಷಿ ವ್ಯವಸ್ಥೆಗೆ ಕಾಯಕಲ್ಪ ತರಬೇಕು. ಆದರೆ ದಾಸ್ಯಕ್ಕೊಳಪಡಿಸಬಾರದು ಎಂದು ಕಿಡಿಕಾರಿದ್ದಾರೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close