ಅಂತರಾಷ್ಟ್ರೀಯ

ಬ್ರೆಕೀಂಗ್ ನ್ಯೂಸ್ : ಜೂನ್ 30ವರೆಗೂ ರೈಲು ಸಂಚಾರ ರದ್ದು; ರೈಲ್ವೆ ಇಲಾಖೆ ಘೋಷಣೆ

ಕೊರೋನಾ ವೈರಸ್​ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್​ಡೌನ್​ ಮುಂದುವರಿಯುತ್ತಲೇ ಇದೆ. ಹೀಗಾಗಿ, ಜೂನ್​ 30ರವರೆಗೂ ರೈಲು ಸಂಚಾರವನ್ನು ರದ್ದು ಮಾಡಿರುವುದಾಗಿ ರೈಲ್ವೆ ಇಲಾಖೆ ಘೋಷಣೆ ಮಾಡಿದೆ.

ಮೂರನೇ ಹಂತದ ಲಾಕ್​ಡೌನ್​ ಪೂರ್ಣಗೊಂಡ ನಂತರ ರೈಲು ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ರೈಲ್ವೆ ಇಲಾಖೆ ಹೇಳಿತ್ತು. ಅಲ್ಲದೆ, ಆನ್​ಲೈನ್ ಬುಕ್ಕಿಂಗ್​​ಗೂ ಅವಕಾಶ ನೀಡಿತ್ತು. ಆದರೆ, ಈಗ ನಾಲ್ಕನೇ ಹಂತದ ಲಾಕ್​ಡೌನ್​ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಜೂನ್​ 30ರವರೆಗೂ ರೈಲು ಸಂಚಾರ ಇರುವುದಿಲ್ಲ ಎಂದು ಹೇಳಿದೆ. ಈಗಾಗಲೇ ಬುಕ್​ ಮಾಡಲಾದ ಟಿಕೆಟ್​ಗಳನ್ನು ಕ್ಯಾನ್ಸಲ್​ ಮಾಡಿ ಹಣ ಹಿಂದಿರುಗಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು, ಶ್ರಮಿಕ್​ ರೈಲುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ರೈಲಿನ ಮೂಲಕ ಆಯಾ ರಾಜ್ಯಗಳಿಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಈ ರೈಲುಗಳು ನಿಗಧಿತ ಸಮಯಕ್ಕೆ ಸಂಚಾರ ನಡೆಸಲಿವೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close