ಅಂತರಾಷ್ಟ್ರೀಯ

ಕೇರಳದಲ್ಲಿ ಮತ್ತೆ ಕೊರೋನಾ ಮಹಾಮಾರಿ ಹಾವಳಿ; ಕಳವಳ ವ್ಯಕ್ತಪಡಿಸಿದ ಸಿಎಂ ಪಿಣರಾಯಿ ವಿಜಯನ್

Posted by : Sirajuddin Bangar

Source : ANI

ವಿದೇಶದಿಂದ ಬಂದ 311 ಮಂದಿಗೆ ಸೋಂಕು ದೃಢಪಟ್ಟಿದೆ. ಈ  ಪೈಕಿ ಎಂಟು ಮಂದಿ ವಿದೇಶಿಯರು. ಇತರ ರಾಜ್ಯಗಳಿಂದ ಬಂದ ಸುಮಾರು 70 ಜನರಿಗೆ ಈ ರೋಗ ಪತ್ತೆಯಾಗಿದೆ. 187 ಜನರಿಗೆ ಸಂಪರ್ಕದ ಮೂಲಕ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ.

ನವದೆಹಲಿ: ಸಂಪೂರ್ಣ ‌ನಿಯಂತ್ರಣಕ್ಕೆ ಬಂದಿದ್ದ ಕೊರೋನಾ ಸೋಂಕು ಹರಡುವಿಕೆ ಕೇರಳದಲ್ಲಿ ಮತ್ತೆ ಹೆಚ್ಚಾಗಿದೆ. ಇಂದು 16 ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ. ಇಂದು 16 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿರವುದು ಆತಂಕಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ವಯನಾಡ್ ಜಿಲ್ಲೆಯಿಂದ ಐವರಿಗೆ, ಮಲಪ್ಪುರಂ ಜಿಲ್ಲೆಯಿಂದ ನಾಲ್ವರಿಗೆ, ಆಲಪ್ಪುಳ ಮತ್ತು ಕೋಳಿಕೋಡ್ ಜಿಲ್ಲೆಗಳಿಂದ ಇಬ್ಬರಿಗೆ ಮತ್ತು ಕೊಲ್ಲಂ, ಪಾಲಕ್ಕಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಂದ ತಲಾ ಒಬ್ಬೊಬ್ಬರಿಗೆ ರೋಗ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಹೊಸದಾಗಿ ಪತ್ತೆಯಾಗಿರುವ 16 ಮಂದಿಯ ಪೈಕಿ ಏಳು ಮಂದಿ ವಿದೇಶದಿಂದ, ನಾಲ್ವರು ತಮಿಳುನಾಡಿನಿಂದ ಮತ್ತು ಇಬ್ಬರು ಮುಂಬೈನಿಂದ ಬಂದವರು. ಈವರೆಗೆ 576 ರೋಗಿಗಳಿಗೆ ಈ ರೋಗ ದೃಢಪಟ್ಟಿದೆ. ಈ ಪೈಕಿ 80 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವುದು ಆತಂಕದ ವಿಷಯವಾಗಿದೆ. ಸಂಪರ್ಕದ ಮೂಲಕ ರೋಗ ಹರಡುವ ಸಾಧ್ಯತೆ ಇದೆ. ಮೀಸಲು ಹೆಚ್ಚಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 48,825 ಜನರು ನಿರೀಕ್ಷಣೆಯಲ್ಲಿದ್ದಾರೆ. ಈ ಪೈಕಿ 48,287 ಜನರು ಮನೆಗಳಲ್ಲಿ ಮತ್ತು 538 ಜನರು ಆಸ್ಪತ್ರೆಗಳಲ್ಲಿ ನಿರೀಕ್ಷಣೆಯಲ್ಲಿರುವರು. ಒಟ್ಟು 122 ಜನರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲಪ್ಪುರಂನಲ್ಲಿ ಹೆಚ್ಚಿನ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 36 ಮಂದಿ ಕೋಳಿಕೋಡ್​ನಲ್ಲಿ 17 ಮತ್ತು ಕಾಸರ್ ‌ಗೋಡ್‌ ನಲ್ಲಿ 16 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಕರಣಗಳು ವಯನಾಡ್ ಜಿಲ್ಲೆಯಿಂದ ವರದಿಯಾಗಿದೆ ಎಂದಿದ್ದಾರೆ.

ಇಲ್ಲಿಯವರೆಗೆ 42,201 ವ್ಯಕ್ತಿಗಳ (ಓಗ್ಮೆಂಟೆಡ್ ಮಾದರಿ ಸೇರಿದಂತೆ) ಮಾದರಿಯನ್ನು ಪರಿಶೀಲನೆಗಾಗಿ ಕಳುಹಿಸಲಾಗಿದೆ. ಇದರಲ್ಲಿ ಲಭ್ಯವಾದ 40,639 ಮಾದರಿಗಳ, ತಪಾಸಣಾ ಫಲಿತಾಂಶ ಋಣಾತ್ಮಕವಾಗಿವೆ. ಇದಲ್ಲದೆ, ಸೆಂಟಿನೆಲ್ ಸರ್ವೈಲೆನ್ಸ್ ಭಾಗವಾಗಿ ಆರೋಗ್ಯ ಕಾರ್ಯಕರ್ತರು, ಅತಿಥಿ ಕೆಲಸಗಾರರು ಮತ್ತು ಸಾಮಾಜಿಕ ಸಂಪರ್ಕ ಹೆಚ್ಚಾಗಿರುವ ವ್ಯಕ್ತಿಗಳ ಆದ್ಯತೆಯ ಗುಂಪುಗಳಿಂದ 4630 ಮಾದರಿಗಳನ್ನು ಸಂಗ್ರಹಿಸಿರುವುದರಲ್ಲಿ 4424 ಮಾದರಿಗಳು ನಕಾರಾತ್ಮಕವಾಗಿವೆ. ಕೇರಳದಲ್ಲಿ ಪ್ರಸ್ತುತ 16 ಹಾಟ್‌ಸ್ಪಾಟ್‌ಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ವಿದೇಶದಿಂದ ಬಂದ 311 ಮಂದಿಗೆ ಸೋಂಕು ದೃಢಪಟ್ಟಿದೆ. ಈ  ಪೈಕಿ ಎಂಟು ಮಂದಿ ವಿದೇಶಿಯರು. ಇತರ ರಾಜ್ಯಗಳಿಂದ ಬಂದ ಸುಮಾರು 70 ಜನರಿಗೆ ಈ ರೋಗ ಪತ್ತೆಯಾಗಿದೆ. 187 ಜನರಿಗೆ ಸಂಪರ್ಕದ ಮೂಲಕ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close