ಕರ್ನಾಟಕ ಸುದ್ದಿ

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಅಧಿಕಾರ ಸ್ವೀಕಾರಕ್ಕೆ ಮೂಹುರ್ತ ಫಿಕ್ಸ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಮಾರ್ಚ್​ 11ರಂದು ಕಾಂಗ್ರೆಸ್ ಹೈಕಮಾಂಡ್​ ನೇಮಕ ಮಾಡಿತ್ತು. ಕೆಪಿಸಿಸಿ ನೂತನ ಸಾರಥಿಯಾಗಿ ನೇಮಕಗೊಂಡಿರುವ ಡಿಕೆ ಶಿವಕುಮಾರ್ ಅವರ ಪದಗ್ರಹಣಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಮೇ 31ರಂದು ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

15 ಕ್ಷೇತ್ರಗಳ ಉಪಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್​ಗೆ ಭಾರೀ ಹಿನ್ನಡೆಯಾಗಿತ್ತು. ಇದಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ನೇಮಕ ಮಾಡಿತ್ತು. ಈ ಸ್ಥಾನಕ್ಕೆ ಕೆ.ಎಚ್​. ಮುನಿಯಪ್ಪ, ಎಂ.ಬಿ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಹೆಸರು ಕೇಳಿಬಂದಿತ್ತು. ಆದರೆ, ಎಐಸಿಸಿ ನಾಯಕರು ಅಂತಿಮವಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದ್ದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close