ಕರ್ನಾಟಕ ಸುದ್ದಿ

ಬ್ರೆಕೀಂಗ್ ನ್ಯೂಸ್ ; ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನಾಳೆ ನಿಗದಿಯಾಗಲಿದೆ ದಿನಾಂಕ..?

Posted By : Sirajuddin Bangar

Source: DH

ಲಾಕ್‍ಡೌನ್ ಜಾರಿಯಾದ ಪರಿಣಾಮ ಮುಂದೂಡಿಕೆಯಾಗಿದ್ದ ಬಹುನಿರೀಕ್ಷಿತ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ವೇಳಾಪಟ್ಟಿ ನಿಗದಿ ಪಡಿಸುವ ಸಂಬಂಧ ನಾಳೆ ಮಹತ್ವದ ಸಭೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ವೇಳಾಪಟ್ಟಿ ನಿಗದಿಯಾಗುವ ಸಂಭವವಿದೆ.

ಈ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದ ಸುರೇಶ್‍ಕುಮಾರ್, ಪರೀಕ್ಷೆ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ಕೊಟ್ಟಿದ್ದರು.

ಈಗಾಗಲೇ ಬಹುತೇಕ ಕಡೆ ಸಿದ್ಧತೆಗಳನ್ನು ಪೂರ್ಣ ಗೊಳಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗುವಂತೆ ಮೌಖಿಕವಾಗಿ ಸೂಚನೆ ಕೊಡಲಾಗಿದೆ. ವಿದ್ಯಾರ್ಥಿಗಳಿಗೆ 15 ದಿನ ಮುಂಚಿತವಾಗಿ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು.

ಯಾರು ಎಲ್ಲಿ ಪರೀಕ್ಷೆ ಬರೆಯಲು ಇಷ್ಟ ಪಡುತ್ತಾರೋ ಅಂತಹ ಕೇಂದ್ರಗಳಲ್ಲೇ ಅವಕಾಶ ನೀಡುವುದು, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಕೊಠಡಿಗಳಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಕೆ, ಥರ್ಮಲ್ ಪರೀಕ್ಷೆ ಸೇರಿದಂತೆ ಕೊರೊನಾ ಸೋಂಕು ಹಬ್ಬದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸಚಿವರು ಸೂಚನೆ ನೀಡಿದ್ದರು.

ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳು ಆರಂಭವಾಗಲಿವೆಯೋ ಅಂತಹ ಕಡೆ ಈಗಾಗಲೇ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು ವೇಳಾಪಟ್ಟಿ ಪ್ರಕಟಣೆ ಮಾಡುವ ನಿರೀಕ್ಷೆ ಇದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಈ ಬಾರಿ ಶೈಕ್ಷಣಿಕ ವರ್ಷ ಎರಡು ತಿಂಗಳು ವಿಳಂಬವಾಗಿ ಆರಂಭವಾಗುವ ಸಂಭವವಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ, ದ್ವಿತೀಯ ಪಿಯುಸಿ, ಸಿಇಟಿ, ಕೌನ್ಸಿಲಿಂಗ್ ಪ್ರಕ್ರಿಯೆಗಳು ಮುಗಿದ ನಂತರವೇ ಶಾಲಾ-ಕಾಲೇಜುಗಳು ತೆರೆಯಲಿವೆ.

ಒಂದು ಮೂಲದ ಪ್ರಕಾರ, 1ರಿಂದ 9ರ ವರೆಗೆ ಪರೀಕ್ಷೆಯನ್ನೇ ನಡೆಸದೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಿರುವ ಹಿನ್ನೆಲೆಯಲ್ಲಿ ಹೆಚ್ಚು ತಡ ಮಾಡದೆ ಜುಲೈ ತಿಂಗಳ ಮೊದಲ ವಾರದಲ್ಲೇ ನರ್ಸರಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮ ಹಾಗೂ ಪ್ರೌಢ ಶಾಲೆಗಳನ್ನು ತೆರೆಯಲು ಇಲಾಖೆ ಚಿಂತನೆ ನಡೆಸಿದೆ. ಅಂತಿಮವಾಗಿ ಪೋಷಕರು, ಶಿಕ್ಷಣ ತಜ್ಞರ ಸಲಹೆ ಪಡೆದ ಬಳಿಕವೇ ನಿರ್ಧಾರ ಹೊರಬೀಳಲಿದೆ.

Tags
Continue

Related Articles

Leave a Reply

Your email address will not be published. Required fields are marked *

Back to top button
Close
Close