ಮಾನವಿರಾಯಚೂರು ಜಿಲ್ಲೆ ಸುದ್ದಿಸಿರವಾರ

ಗಣದಿನ್ನಿ ರಸ್ತೆ ಅಪಘಾತ ರೋಗಿಗಳ ಯೋಗ ಕ್ಷೇಮ ವಿಚಾರಿಸಲು ರಾಯಚೂರು ರಿಮ್ಸ್ ಆಸ್ಪತ್ರೆಗೆ ತೆರಳಿದ ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ

ಸಿರವಾರ ಪಟ್ಟಣದ ಹತ್ತಿರದಲ್ಲಿರುವ ಗಣದಿನ್ನಿ ಕಾಲುವೆ ಹತ್ತಿರ ಗಣದಿನ್ನಿ ಗ್ರಾಮದ ಕೂಲಿ ಕಾರ್ಮಿಕರು ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕೆಲಸ ಮಾಡಲು ತೆರಳಿದ್ದರು.
ಕೆಲಸ ಮುಗಿಸಿಕೊಂಡು ಊರಿಗೆ ಮರಳುವಾಗ ಚಾಲಕನ ನಿಯಂತ್ರಣ ತಪ್ಪಿ ಗಣದಿನ್ನಿ ಕಾಲುವೆ ಹತ್ತಿರ ವಾಹನ ಪಲ್ಟಿ ಹೊಡೆದು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 35ಕ್ಕೂ ಹೆಚ್ಚು ಜನರು ಗಂಭೀರ ಗಾಯಕ್ಕೊಳಗಾಗಿದ್ವದರು,ಅವರನ್ನು ಹೆಚ್ಚಿನ ಚಿಕಿತ್ಸೆಗೆ ರಾಯಚೂರು ರಿಮ್ಸ್ ಅಸ್ಪತ್ರಗೆ ಸೇರಿಸಲಾಗಿದ್ದು.

10ನೇ ತರಗತಿ ವಿದ್ಯಾರ್ಥಿನಿ ಸೇರಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ, 30 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ.
ವಿಷಯ ತಿಳಿದ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ತೆರಳಿದ ಮಾನವಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕರವರು.
ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ನಿಮ್ಮ ಜೊತೆ ನಾವಿದ್ದೇವೆ ಯಾವುದೇ ರೀತಿ ಭಯ ಪಡಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close