ಕರ್ನಾಟಕ ಸುದ್ದಿ

ಬ್ರೆಕೀಂಗ್ ನ್ಯೂಸ್ ; ಕರ್ನಾಟಕದಲ್ಲಿ ಜೂನ್ 25ರಿಂದ ಎಸ್​ಎಸ್​ಎಲ್​ಸಿ, ಜೂನ್ 18ಕ್ಕೆ ಪಿಯುಸಿ ಪರೀಕ್ಷೆ

ವರದಿ : ಸಿರಾಜುದ್ದೀನ್ ಬಂಗಾರ

ಕರ್ನಾಟಕದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.

ಕರ್ನಾಟಕದಲ್ಲಿ ಲಾಕ್​ಡೌನ್​ ಘೋಷಿಸಿದ್ದರಿಂದ ಪಿಯುಸಿ, ಎಸ್​ಎಸ್​ಎಲ್​ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಎಸ್​ಎಸ್ಎಲ್​ಸಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.

ದೇಶಾದ್ಯಂತ ಮೇ 31ರವರೆಗೆ ಲಾಕ್​ಡೌನ್​ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಶಾಲಾ, ಕಾಲೇಜುಗಳನ್ನು ತೆರೆಯದಂತೆ ನಿನ್ನೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಡೈಸ್ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಗಳನ್ನು ಯಾವಾಗ ಆರಂಭ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಈ ವರ್ಷ ಯಾವುದೇ ಶಾಲೆಗಳು ಶುಲ್ಕದಲ್ಲಿ ಹೆಚ್ಚಳ ಮಾಡದಂತೆ ಸೂಚಿಸಿದ್ದೇವೆ, ಸಾಧ್ಯವಾದರೆ ಕಡಿಮೆ ಮಾಡಿ ಎಂದು ಸರ್ಕಾರ ಸೂಚಿಸಿದೆ. ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ಆನ್​ಲೈನ್​ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.

Tags
Continue

Related Articles

Leave a Reply

Your email address will not be published. Required fields are marked *

Back to top button
Close
Close