ಕರ್ನಾಟಕ ಸುದ್ದಿ

ಬ್ರೆಕೀಂಗ್ ನ್ಯೂಸ್ ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ: ಧರೆಗುರುಳಿದ ಮರಗಳು

Posted By : Sirajuddin Bangar

ಚಿಕ್ಕಮಗಳೂರು: ಜಿಲ್ಲಾದ್ಯಂತ ಮಳೆಯ ಆರ್ಭಟ ಶುರುವಾಗಿದೆ. ಭಾನುವಾರ ಸಂಜೆಯಿಂದ ಶುರುವಾದ ವರುಣನ ಆರ್ಭಟ ಸೋಮವಾರವು ಮುಂದುವರೆದಿದೆ.

ಜಿಲ್ಲೆಯ ಮಲೆನಾಡು, ಬಯಲು ಸೀಮೆ ಭಾಗದಲ್ಲಿ ಎಡಬಿಡದೆ ಮಳೆಯಾಗಿದ್ಧು ಜೊತೆಯ ಗಾಳಿಯ ರಭಸಕ್ಕೆ ಅನೇಕ ಕಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.

ಚಿಕ್ಕಮಗಳೂರು ನಗರದಲ್ಲಿ ಭಾನುವಾರ ಮಧ್ಯರಾತ್ರಿ ಎರಡು ಗಂಟೆಗೂ ಹೆಚ್ಚುಕಾಲ ಎಡಬಿಡದೆ ಮಳೆಯಾಗಿದ್ದು, ಸೋಮವಾರ ಬೆಳಿಗ್ಗೆಯೂ ತುತುಂರು ಮಳೆಯಾಗಿದೆ.

ಇನ್ನೂ ಜಿಲ್ಲೆಯ ಕಡೂರು, ಬೀರೂರು, ತರೀಕರೆ ಭಾಗದಲ್ಲಿ ಉತ್ತಮ ಮಳೆಯಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಮಲೆನಾಡು ಭಾಗವಾದ ಮೂಡಿಗರೆ, ಕಳಸ, ಕೊಟ್ಟಿಗೆಹಾರ, ಎನ್.ಆರ್.ಪುರ, ಕೊಪ್ಪ, ಶ್ರೀ ಗೇರಿ ಸುತ್ತಮುತ್ತ ಉತ್ತಮ ಮಳೆಯಾಗಿದ್ದು, ಅಡಿಕೆ, ಕಾಫಿ, ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿಸಿದೆ.

ದೇಶದೆಲ್ಲೆಡೆ ಕೊರೋನಾ ವೈರಸ್​ನಿಂದಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಅಪ್ಪಳಿಸಿದೆ. ಈ ಚಂಡಮಾರುತಕ್ಕೆ ಅಂಫಾನ್ (Amphan) ಎಂದು ಹೆಸರಿಡಲಾಗಿದೆ. ಈ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲವು ಭಾಗಗಳಲ್ಲಿ ಇನ್ನು ಒಂದಷ್ಟು ದಿನ ಮಳೆ ಮುಂದುವರಿಯಲಿದೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close