ಸಿರವಾರ

ಬ್ರೆಕೀಂಗ್ ನ್ಯೂಸ್ ; ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರಕ್ಕಾಗಿ ಅರ್ಜಿ ಅಹ್ವಾನ

ವರದಿ: ಸಿರಾಜುದ್ದೀನ್ ಬಂಗಾರ್

ಸಿರವಾರ: ಆಟೋ, ಟ್ಯಾಕ್ಸಿ ಚಾಲಕರಿಗೆ ಸರಕಾರದಿಂದ ಪರಿಹಾರವನ್ನು ಘೋಷಿಸಿದ್ದು, ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಸಿರವಾರ ಪಟ್ಟಣದ ” ಕ್ಲಾಸಿಕ್ ಕಂಪ್ಯೂಟರ್ ತರಬೇತಿ ಕೇಂದ್ರ” ದಲ್ಲಿ ಅರ್ಜಿಗಳನ್ನು ಹಾಕಲಾಗುವುದು.

ವಿಳಾಸ: ಬಿ ಎಸ್ ಎನ್ ಎಲ್ ಆಫೀಸ್ ಹತ್ತಿರ , ಕಡದಿನ್ನಿ ಕಾಂಪ್ಲೆಕ್ಸ್ ಸಿರವಾರ.

ಮೋ: 9380511448, 9632081839

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

 1. ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳು
 2. ಫಲಾನುಭವಿಗಳು ಆಟೋರಿಕ್ಷಾ/ಟ್ಯಾಕ್ಸಿ ಚಾಲಕರಾಗಿದ್ದು ದಿನಾಂಕ 01-03-2020 ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು
 3. ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಪೋರ್ಟಲ್‌ನಲ್ಲಿ ನಮೂದಿಸಬೇಕು
 4. ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕ್ ನ IFSC ಕೋಡ್MICR ಕೋಡ್‌ಗಳ ವಿವರಗಳನ್ನು ಪೋರ್ಟಲ್‌ನಲ್ಲಿ ಇರಬೇಕು
 5. ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್‌ನಲ್ಲಿ ನಮೂದಿಸಬೇಕು
 6. ವಾಹನ್ -4 ತಂತ್ರಾಂಶದಿಂದ ವಿವರಗಳನ್ನು ನೇರವಾಗಿ ಪಡೆಯುವುದು
 7. ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು
 8. ಆಟೋರಿಕ್ಷಾ/ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು
 9. ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು “ಸೇವಾಸಿಂಧು” ಆ್ಯಪ್ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಸೇವಾಸಿಂಧು ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ
 10. ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ DBT ಮಾಡಬೇಕು ಆನ್‌ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು
 11. ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು

Continue

Related Articles

Leave a Reply

Your email address will not be published. Required fields are marked *

Back to top button
Close
Close