ಕರ್ನಾಟಕ ಸುದ್ದಿ

ಆಯುಷ್ ವೈದ್ಯರ ಜೊತೆ ಆರೋಗ್ಯ ಸಚಿವರ ಸಭೆ;ಎಂಬಿಬಿಎಸ್ ವೈದ್ಯರಿಗೆ ಸಮಾನಾದ ವೇತನಕ್ಕೆ ಬೇಡಿಕೆ

— ಸಿರಾಜುದ್ದೀನ್ ಬಂಗಾರ್, ಸಿರವಾರ

ಎಂಬಿಬಿಎಸ್ ವೈದ್ಯರ ಸಮನಾಗಿ ಆಯುಷ್ ವೈದ್ಯರು ವೇತನ ಕೇಳಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಒಂದು ಸಮಿತಿ ಮಾಡುತ್ತೇವೆ. ಆ ಸಮಿತಿ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು

ಆಯುಷ್ ವೈದ್ಯ ಸಿಬ್ಬಂದಿ ವೇತನ ಹೆಚ್ಚಳ ಮಾಡಬೇಕು ಎನ್ನುವ ಬೇಡಿಕೆ ಬಹಳ ದಿನದಿಂದ ಕೇಳಿ ಬರುತ್ತಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದರು.

ವಿಧಾನಸೌಧದಲ್ಲಿ ಆಯುಷ್ ವೈದ್ಯ ಸಿಬ್ಬಂದಿ ಜೊತೆಗೆ ನಡೆದ ಸಭೆ ಬಗ್ಗೆ ಮಾತನಾಡಿದ ಅವರು, ಎಂಬಿಬಿಎಸ್ ವೈದ್ಯರ ಸಮನಾಗಿ ಆಯುಷ್ ವೈದ್ಯರು ವೇತನ ಕೇಳಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಒಂದು ಸಮಿತಿ ಮಾಡುತ್ತೇವೆ. ಆ ಸಮಿತಿ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ಕೊಡಿ ಎಂದು ಹೇಳಿದ್ದಾರೆ. ಪ್ರಧಾನಿಗಳು  ಹೇಳಿದಂತೆ ಆಯುಷ್ ಚಿಕಿತ್ಸೆಗೆ ನಾವು ಹೆಚ್ಚು ಆದ್ಯತೆ ಕೊಡುತ್ತೇವೆ  ಎಂದು ತಿಳಿಸಿದರು.

ಇದೇ ವೇಳೆ, ಮಾಗಡಿಯಲ್ಲಿ ಕೆಎಸ್ಆರ್​ಟಿಸಿ ಚಾಲಕನಿಗೆ ಕೊರೋನಾ ಬಂದ ವಿಚಾರದ ಬಗ್ಗೆ ಮಾತನಾಡಿದ ಆರೋಗ್ಯ ಸಚಿವರು, ಆ ಚಾಲಕನ ಸಂಪರ್ಕದಲ್ಲಿ ಇದ್ದವರಿಗೆ ಪರೀಕ್ಷೆ ಮಾಡುತ್ತೇವೆ. ಜೊತೆಗೆ ಕೆಎಸ್ಆರ್​ಟಿಸಿಯ ಎಲ್ಲ ಸಿಬ್ಬಂದಿಗೂ ಕೊರೋನಾ ಟೆಸ್ಟ್ ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು.

ಡ್ರೈವರ್​ಗೆ ಕೊರೋನಾ ಬಂದಿದ್ದರಿಂದ ಅವರ ಜೊತೆಗೆ ಪ್ರಯಾಣಿಸಿದವರನ್ನ ಟೆಸ್ಟ್ ಮಾಡಲು ಸೂಚನೆ ನೀಡಿದ್ದೇನೆ. ಕೆಎಸ್​ಆರ್​ಟಿಸಿ ಸಿಬ್ಬಂದಿ ಮತ್ತು ಅವರ ಕುಟುಂಬ ವರ್ಗದವರು; ರೆಡ್ ಝೋನ್ ಹಾಗೂ ಕಂಟೋನ್ಮೆಂಟ್ ಝೋನ್​ನಿಂದ ಬಂದು ಕೆಲಸ ಮಾಡುತ್ತಿರುವವರಿಗೂ, ಜೊತೆಗೆ ಅವರ ಸಂಪರ್ಕದಲ್ಲಿ ಇರುವವರಿಗೂ ಟೆಸ್ಟ್ ಮಾಡಲಾಗುವುದು ಎಂದರು.

ರಾಜ್ಯಾದ್ಯಂತ ಕೊರೋನಾ ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಟೆಸ್ಟ್ ಮಾಡಿಸಲು ಇಲಾಖೆಯು ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಕೆಎಸ್​ಆರ್​ಟಿಸಿ ಸಿಬ್ಬಂದಿ ಆತಂಕ ಪಡುವ ಅಗತ್ಯ ಇಲ್ಲ ಎಂದು ತಿಳಿಸಿದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close