ರಾಯಚೂರು ಜಿಲ್ಲೆ ಸುದ್ದಿಸಿರವಾರ

ಸಿರವಾರ : ಪರೀಕ್ಷಾ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ವರದಿ : ಸಿರಾಜುದ್ದೀನ್ ಬಂಗಾರ್, ಸಿರವಾರ

ಸಿರವಾರ ಮೇ.26 : ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಸಿರವಾರ ತಾಲೂಕ ಸಮಿತಿಯವತಿಯಿಂದ ಇಂದು ಗುಲ್ಬರ್ಗಾ ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿಯನ್ನು ಮಾನ್ಯ ತಹಶಿಲ್ದಾರರಿಗೆ ಸಲ್ಲಿಸಲಾಯಿತು.

ಕೊರೋನ ವೈರಸ್ ಹರಡುವಿಕೆ ಮತ್ತು ಲಾಕ್ಡೌನ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾರ್ಥಿಗಳ ಪಾಲಕ ಮತ್ತು ಪೋಷಕರು ಆದಾಯವಿಲ್ಲದೆ ಹೊಟ್ಟೆ ತುಂಬಿಸಿಕೊಳ್ಳಲು ಪರದಾಡುವಂತಾಗಿದೆ ಹಾಗೂ ಬಹುತೇಕ ವಿದ್ಯಾರ್ಥಿ ಗಳು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವ ಕಾರಣ ಆನ್ ಲೈನ್ ಮೂಲಕ ಪರೀಕ್ಷಾ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯ ದಿಢೀರನೆ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದು ಮತ್ತು ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಕಟ್ಟಬೇಕೆಂದು ವಿದ್ಯಾರ್ಥಿಗಳಿಗೆ ಆದೇಶದ ತಿಳಿಸಿರುವುದು ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ.

ಈ ನೀತಿಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಸಿರವಾರ ತಾಲೂಕ ಸಮಿತಿ ಖಂಡಿಸುತ್ತದೆ. ಆದಾಯವಿಲ್ಲದೆ ಅತಂತ್ರ ಪರಿಸ್ಥಿತಿಯಲ್ಲಿರುವ ವಿದ್ಯಾರ್ಥಿಗಳ ಪಾಲಕ ಮತ್ತು ಪೋಷಕರ ಬಳಿ ಹಾಗೂ ವಿದ್ಯಾರ್ಥಿಗಳಿಂದ ಯಾವುದೇ ರೀತಿಯಾದಂತಹ ಪರೀಕ್ಷಾ ಶುಲ್ಕವನ್ನು ಪಡೆಯದೆ ಉಚಿತವಾಗಿ ಈ ಬಾರಿ ವಿವಿಧ ಹಂತದ ಪದವಿ ಮತ್ತು ಸ್ನಾತಕೋತ್ತರ ಪದವಿ ಓದುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ರಹಿತವಾಗಿ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಿಕೊಡಬೇಕು.

ಪರೀಕ್ಷಾ ಶುಲ್ಕವನ್ನು ಕಡ್ಡಾಯವಾಗಿ ಕಟ್ಟಬೇಕೆಂದು ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆದು ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷೆಯನ್ನು ಬರೆಯಲು ಅವಕಾಶ ಮಾಡಿಕೊಡಬೇಕು ಹಾಗೂ ಪರೀಕ್ಷಾ ಶುಲ್ಕವನ್ನು ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಯೆ ಭರಿಸಬೇಕು, ಒಂದು ವೇಳೆ ತಾವು ಹೊರಡಿಸಿದ ಆದೇಶದ ಕಡ್ಡಾಯ ಪಾಲನೆಗೆ ಮುಂದಾದಲ್ಲಿ ವಿದ್ಯಾರ್ಥಿಗಳೊಂದಿಗೆ ಸೇರಿ SFI ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟಕ್ಕೆ ಮಾಡಲಾಗುವುದು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದ್ದು, ಸಿರವಾರ ತಹಶಿಲ್ದಾರರಿಗೆ ಇಂದು SFI ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ SFI ತಾಲೂಕ ಅಧ್ಯಕ್ಷರಾದ ಚಿದಾನಂದ.ಕರಿಗೂಳಿ, ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ, ಖಜಾಂಚಿಗಳಾದ ಸುದರ್ಶನ್,ಸಹ ಕಾರ್ಯದರ್ಶಿ ಪ್ರತಾಪ ರೆಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags
Continue

Related Articles

Leave a Reply

Your email address will not be published. Required fields are marked *

Back to top button
Close
Close