ಕರ್ನಾಟಕ ಸುದ್ದಿ

ಬ್ರೆಕೀಂಗ್ ನ್ಯೂಸ್ ; ಮೂರ್ನಾಲ್ಕು ದಿನಗಳಲ್ಲಿ ರಾಜ್ಯಕ್ಕೆ ಮಾನ್ಸೂನ್ ಪ್ರವೇಶ; ಇನ್ನೆರಡು ದಿನವೂ ರಾಜ್ಯಾದ್ಯಂತ ಮಳೆ ಸಾಧ್ಯತೆ

Posted By: Sirajuddin Bangar

Source:NS18

ಬೆಂಗಳೂರು(ಮೇ 30): ಅರಬ್ಬೀ ಸಮುದ್ರದಲ್ಲಿ, ಕೇರಳ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವುದರಿಂದ ಮುಂದಿನ ಎರಡು ದಿನದಲ್ಲಿ ವಾಯುಭಾರ ಕುಸಿತವಾಗಲಿದೆ. ಈ ಪರಿಣಾಮವಾಗಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ನಾಳೆಯಿಂದ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳೆದ ಮೂರ್ನಾಲ್ಕು ದಿನದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಆದರೆ, ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಿರಲಿಲ್ಲ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಇನ್ನು ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಟ್ರಫ್ ನಿರ್ಮಾಣವಾಗಿರುವುದರಿಂದ ಮಳೆ ಬರಲಿದೆ. ನಿರೀಕ್ಷೆಗಿಂತ ಮೊದಲೇ ಜೂನ್ ಒಂದಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗಲಿದೆ. ಇದಾದ ಒಂದೆರಡು ದಿನಗಳಲ್ಲಿ ಕರ್ನಾಟಕ ರಾಜ್ಯವನ್ನೂ ಮುಂಗಾರು ಪ್ರವೇಶ ಮಾಡಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರಾದ ಡಾ. ಶ್ರೀನಿವಾಸ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆ ಬೀಸುತ್ತಿದ್ದು ಬಹುತೇಕ ಎಲ್ಲಾ ಏರಿಯಾಗಳಲ್ಲಿ ಮರಗಳು ಧರೆಗುರುಳಿವೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close