ಕರ್ನಾಟಕ ಸುದ್ದಿ

ನಾಳೆಯಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭ

— ಸಿರಾಜುದ್ದೀನ್ ಬಂಗಾರ್ ಸಂಪಾದಕರು ಕರ್ನಾಟಕ-ಜ್ವಾಲೆ

ಕಳೆದ ಒಂದು ವಾರದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಪಶ್ಚಿಮ ಬಂಗಾಳ, ಒರಿಸ್ಸಾ ಮುಂತಾದ ಕಡೆ ಅಂಫಾನ್​ ಚಂಡಮಾರುತದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆಯಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಈ ವರ್ಷ ಜೂನ್ 5ರಂದು ದಕ್ಷಿಣ ರಾಜ್ಯಗಳಲ್ಲಿ ಮಳೆಗಾಲ ಆರಂಭವಾಗಲಿದೆ, ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಮಳೆಗಾಲ ತಡವಾಗಿ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತದಿಂದಾಗಿ ಮಾನ್ಸೂನ್ ಮಾರುತಗಳು ಜೂನ್ 1ರಂದು ಕೇರಳ ಪ್ರವೇಶಿಸಲಿವೆ ಎಂದು ಮಾಹಿತಿ ನೀಡಿತ್ತು. ಆದರೆ, ಈಗಾಗಲೇ ಕೇರಳಕ್ಕೆ ಮಾನ್ಸೂನ್ ಮಾರುತಗಳು ಪ್ರವೇಶಿಸಿವೆ.

ನೈಋತ್ಯ ಮುಂಗಾರು ಮಾರುತಗಳು ಅವಧಿಗೂ ಮುನ್ನ ಕೇರಳಕ್ಕೆ ಪ್ರವೇಶವಾಗಿವೆ. ನಾಳೆ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ಮಾಡಲಿದೆ. ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ಮುಂಗಾರು ಭಾರೀ ಹೊಡೆತ ಕೊಟ್ಟಿದೆ. ಈ ಬಾರಿ ಮಳೆಯ ಆರ್ಭಟ ಹೇಗಿರುತ್ತದೆ ಎನ್ನುವ ಕುತೂಹಲದ ಲೆಕ್ಕಾಚಾರ ತಜ್ಞರದ್ದು. ಮೇ 28ರಂದು ಕೇರಳಕ್ಕೆ ಮುಂಗಾರು ಪ್ರವೇಶ ಮಾಡಲಿದೆ.

ಕೇರಳಕ್ಕೆ ಪ್ರವೇಶಿಸಿದ ನಾಲ್ಕನೇ ದಿನ ಕರ್ನಾಟಕಕ್ಕೆ ಮುಂಗಾರು ಮಳೆ ಬರಲಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ. ನೈಋತ್ಯ ಮುಂಗಾರು ಮಾರುತಗಳು ಅವಧಿಗೂ ಮುನ್ನ ಕೇರಳಕ್ಕೆ ಪ್ರವೇಶವಾಗಲಿದೆ. ನಾಳೆ ಮುಂಗಾರು ಮಳೆ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಈ ಬಾರಿ ಮಳೆಯ ಆರ್ಭಟ ಹೇಗಿರುತ್ತದೆ ಎನ್ನುವ ಕುತೂಹಲದ ಲೆಕ್ಕಾಚಾರ ತಜ್ಞರದ್ದು.

Continue

Related Articles

Leave a Reply

Your email address will not be published. Required fields are marked *

Back to top button
Close
Close