ಕರ್ನಾಟಕ ಸುದ್ದಿ

ಬ್ರೇಕಿಂಗ್ ನ್ಯೂಸ್: ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಗರಂ

— ಸಿರಾಜುದ್ದೀನ್ ಬಂಗಾರ್, ಸಂಪಾದಕರು ಕರ್ನಾಟಕ ಜ್ವಾಲೆ

ಲಾಕ್​ಡೌನ್​ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ  150 ಹಾಪ್‍ಕಾಮ್ಸ್ ನೌಕರರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಯಡಿಯೂರಪ್ಪರ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದ 550 ಹಾಪ್‍ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿವೆ. ಮಳಿಗೆಗಳು ತೆರೆಯದೇ ಇರುವವರ  ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ ಎಂದಿದ್ದಾರೆ.

ಇನ್ನು, ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸ್ವಲ್ಪ ಕಡಿಮೆ ಯಾಗಿದೆ. ಹೀಗಾಗಿ ಹೊಸ ಕೊಳವೆಬಾವಿಗಳನ್ನು ಕೊರೆಯಲು ಅನುಮತಿ  ನೀಡಬಾರದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.‌ ಈ ಬಗ್ಗೆ ಒಂದು ತಿಂಗಳ ನಂತರ ಪರಿಸ್ಥಿತಿಯನ್ನು  ಪರಿಶೀಲಿಸಿ ಕೊಳವೆ ಬಾವಿ ತೆರೆಯಲು ಅನುಮತಿ ನೀಡುವಂತೆ ಸೂಚಿಸಿದರು.

ಕಳೆದ ಸಾಲಿನಲ್ಲಿ ಹೆಚ್ಚುವರಿ ಬಿತ್ತನೆ ಬೀಜ ಖರೀದಿಸಿ ವಿತರಿಸಲಾಗಿತ್ತು. ಈ ಬಾರಿಯೂ ಹೆಚ್ಚುವರಿ ಬೀಜ ಬಿತ್ತನೆ ಮಾಡುವಂತೆ ರೈತರು ಒತ್ತಾಯಿಸುತ್ತಿದ್ದಾರೆ ಎಂದು ಸಭೆಯಲ್ಲಿ ಹೇಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಆಹಾರ ಪದಾರ್ಥಗಳ ಸರಪಳಿ ನಿರ್ವಹಣಾ ಕೋಶ ಕಾರ್ಯ ನಿರ್ವಹಿಸುತ್ತಿದೆ. ಅಗ್ರಿ ವಾರ್ ರೂಂ ಸ್ಥಾಪಿಸಿದ್ದು, ಪರಿಕರಗಳ ಲಭ್ಯತೆ, ಉತ್ಪನ್ನಗಳ ಮಾರಾಟ, ಸಾಗಾಣಿಕೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಒದಗಿಸಲಾಗಿದೆ ಎಂದು ಸಭೆಗೆ ಸಚಿವ ಬಿ.ಸಿ.ಪಾಟೀಲ್  ಮಾಹಿತಿ ನೀಡಿದರು.

ರಾಜ್ಯಕ್ಕಿಲ್ಲ ಮಿಡತೆ ಕಾಟ:

ಮಹಾರಾಷ್ಟ್ರ, ರಾಜಸ್ಥಾನಕ್ಕೆ ಸಿಂಹಸ್ವಪ್ನವಾಗಿ ಕಾಡುತ್ತಿರುವ ಮಿಡತೆ ಹಾವಳಿ ಭಯ ಕರ್ನಾಟಕಕ್ಕೂ ಕಾಡಲಿದೆ ಎನ್ನಲಾಗಿತ್ತಿ. ದಕ್ಷಿಣ ಕನ್ನಡದಲ್ಲಿ ಇದೇ ಮಾದರಿಯ ಮಿಡತೆಗಳು ಕೂಡ ಕಾಣಿಸಿಕೊಂಡಿದ್ದವು. ಆದರೆ, ಕರ್ನಾಕಕ್ಕೆ ಮಿಡತೆ ಕಾಟ ಇರುವುದಿಲ್ಲ ಎಂದು ತಜ್ಞರು ಖಚಿತಪಡಿಸಿರುವುದಾಗಿ ಸಚಿವರು ತಿಳಿಸಿದರು.ರೇಷ್ಮೆ ಇಲಾಖೆ:

ಹಿಪ್ಪುನೇರಳೆ ಬೆಳೆ ವಿಸ್ತೀರ್ಣಕ್ಕೆ ಸಂಬಂಧಿಸಿದಂತೆ  ಡ್ರೋನ್ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಒತ್ತುವರಿ ಆಗಿರುವ ಸರ್ಕಾರಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲು ಮುಖ್ಯ ಮಂತ್ರಿಗಳು ಸೂಚಿಸಿದ್ದಾರೆ. ಇದೇ ಸಂದರ್ಭದಲ್ಲಿ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ ಒಟ್ಟು  666 ಕೋಟಿ ರೂ.ಗಳ ಮೊತ್ತವನ್ನು ಆನ್ ಲೈನ್ ಮೂಲಕ ಸಿಎಂ ಬಿಡುಗಡೆ ಮಾಡಿದ್ದಾರೆ. ಬಳಿಕ  ರೈತರಿಗೆ ಕರೆ ಮಾಡಿ  ಹಣ ಸಂದಾಯವಾಗಿರುವ ಬಗ್ಗೆ ಸಿಎಂ ಖಾತರಿಪಡಿಸಿಕೊಂಡಿದ್ದಾರೆ.

ಈ ಸಭೆಯಲ್ಲಿ ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ನಾರಾಯಣಸ್ವಾಮಿ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ  ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಭಾಗಿಯಾಗಿದ್ದರು

Continue

Related Articles

Leave a Reply

Your email address will not be published. Required fields are marked *

Back to top button
Close
Close