ಕರ್ನಾಟಕ ಸುದ್ದಿ

ಬ್ರೇಕಿಂಗ್ ನ್ಯೂಸ್ : ಕೊನೆಗೂ ವಿಜಯ ಮಲ್ಯ ಭಾರತಕ್ಕೆ ಹಸ್ತಾಂತರ; ಇಂದು ರಾತ್ರಿ ಮುಂಬೈ ವಿಮಾನ ನಿಲ್ಧಾಣಕ್ಕೆ ಬಂದಿಳಿಯುವ ಸಾಧ್ಯತೆ

— ಸಿರಾಜುದ್ದೀನ್ ಬಂಗಾರ್ ಸಂಪಾದಕರು ಕರ್ನಾಟಕ-ಜ್ವಾಲೆ ನ್ಯೂಸ್

ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಅವರನ್ನು ಲಂಡನ್‌ ಸರ್ಕಾರ ಭಾರತಕ್ಕೆ ಇಂದು ರಾತ್ರಿ ಹಸ್ತಾಂತರಿಸಲಿದೆ ಎಂದು ತನಿಖಾ ಸಂಸ್ಥೆಗಳ ಮೂಲಗಳು ಬುಧವಾರ ಐಎಎನ್‌ಎಸ್‌ಗೆ ಬಹಿರಂಗಪಡಿಸಿದೆ.

ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿರುವ ವಿಜಯ ಮಲ್ಯ ಅವರನ್ನು ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲೇ ವೈದ್ಯಕೀಯ ತಂಡವೊಂದು ಅವರ ಆರೋಗ್ಯ ತಪಾಸಣೆ ನಡೆಸಲಿದೆ.

ವಿಜಯ ಮಲ್ಯ ಇಂದು ರಾತ್ರಿಯೇ ವಿಮಾನ ನಿಲ್ದಾಣಕ್ಕೆ ಆಗಮಿಸಿದರೆ, ಅವರನ್ನು ಕೆಲಕಾಲ ನಗರದ ಸಿಬಿಐ ಕಚೇರಿಯಲ್ಲಿ ಇರಿಸಿ ನಂತರ ಅವರನ್ನು ಸಿಬಿಐ ಅಧಿಕಾರಿಗಳು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಅಥವಾ ನಾಳೆ ಮುಂಜಾನೆ ಆಗಮಿಸಿದರೆ, ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಸಿಬಿಐ ಅಧಿಕಾರಿಗಳು ಅವರನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2018 ರ ಆಗಸ್ಟ್‌ನಲ್ಲಿ ಮಲ್ಯ ಅವರ ಮನವಿಯನ್ನು ಆಲಿಸಿದ್ದ ಯುಕೆ ನ್ಯಾಯಾಲಯ ಜೈಲಿನ ವಿವರಗಳನ್ನು ಹಂಚಿಕೊಳ್ಳಲು ಭಾರತೀಯ ತನಿಖಾ ಸಂಸ್ಥೆಗಳಿಗೆ ಸೂಚಿಸಿತ್ತು. ಹೀಗಾಗಿ ಮಲ್ಯ ಅವರನ್ನು ಬಂಧಿಸುವ ಮುಂಬೈನ ಆರ್ಥರ್ ರಸ್ತೆಯ ಜೈಲಿನ ಕೋಣೆಯನ್ನು ಸಿಬಿಐ ಅಧಿಕಾರಿಗಳು ವಿಡಿಯೋ ಮಾಡಿ ಕಳುಹಿಸಿದ್ದರು. ಅಲ್ಲದೆ, ಮಲ್ಯ ಹಸ್ತಾಂತರದ ನಂತರ ಅವರನ್ನು ಇರಿಸಿಕೊಳ್ಳಲು ಎಲ್ಲಾ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದರು.

ಆರ್ಥರ್ ರಸ್ತೆಯ ಎರಡು ಎರಡು ಅಂತಸ್ತಿನ ಜೈಲು ಕಟ್ಟಡದಲ್ಲಿ ಮಲ್ಯ ಅವರನ್ನು ಉನ್ನತ ಭದ್ರತಾ ಬ್ಯಾರಕ್‌ಗಳಲ್ಲಿ ಇರಿಸಲಾಗುವುದು ಎಂದು ಏಜೆನ್ಸಿಗಳು ಯುಕೆ ನ್ಯಾಯಾಲಯಕ್ಕೆ ತಿಳಿಸಿದ್ದವು.

ಆರ್ಥರ್ ರಸ್ತೆ ಕಾರಾಗೃಹ ಭೂಗತ ಮತ್ತು ಭಯೋತ್ಪಾದಕ ಸಂಘಟನೆಗಳ ಖೈದಿಗಳನ್ನು ಬಂಧಿಸಲು ಹೆಸರುವಾಸಿಯಾಗಿದ್ದು, ಇದೇ ಕಾರಣಕ್ಕೆ ಈ ಕಾರಾಗೃಹ ಕುಖ್ಯಾತಿಯನ್ನೂ ಗಳಿಸಿದೆ. 26/11 ಮುಂಬೈ ದಾಳಿ ಆರೋಪದ ಮೇಲೆ ಬಂಧಿಸಲ್ಪಟ್ಟ ಏಕೈಕ ಭಯೋತ್ಪಾದಕ ಅಜ್ಮಲ್ ಕಸಬ್ ನನ್ನು ಇದೇ ಕಾರಾಗೃಹದಲ್ಲಿ ಉನ್ನತ ಮಟ್ಟದ ಭದ್ರತೆಯಲ್ಲಿ ಇರಿಸಲಾಗಿತ್ತು.

. ಅಬು ಸೇಲಂ, ಚೋಟಾ ರಾಜನ್, ಮುಸ್ತಫಾ ದೋಸಾ, ಪೀಟರ್ ಮುಖರ್ಜಿಯಾ ಮತ್ತು 13,500 ಕೋಟಿ ರೂ.ಗಳ ಪಿಎನ್‌ಬಿ ವಂಚನೆ ಆರೋಪಿ ವಿಪುಲ್ ಅಂಬಾನಿ ಅವರನ್ನು ಅಲ್ಲಿಯೇ ಇರಿಸಲಾಗಿದೆ.

ಭಾರತದ 17 ಬ್ಯಾಂಕುಗಳಲ್ಲಿ ಸುಮಾರು 9,000 ಕೋಟಿ ರೂ.ಗಳ ಸಾಲ ಡೀಫಾಲ್ಟ್ ಪ್ರಕರಣದಲ್ಲಿ ವಿಜಯ ಮಲ್ಯ ಭಾರತಕ್ಕೆ ಬೇಕಾಗಿದ್ದಾರೆ. ಭಾರತಕ್ಕೆ ಹಸ್ತಾಂತರಿಸುವುದನ್ನು ವಿರೋಧಿಸಿದ್ದ ವಿಜಯ ಮಲ್ಯ ಕಳೆದ ಮೇ 14 ರಂದು ಯುಕೆ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿ ತಿರಸ್ಕೃತಗೊಂಡಿತ್ತು.

Continue

Related Articles

Leave a Reply

Your email address will not be published. Required fields are marked *

Back to top button
Close
Close