ರಾಯಚೂರು ಜಿಲ್ಲೆ ಸುದ್ದಿ

ರಾಯಚೂರು: ಪಶ್ಚಿಮ ಠಾಣೆಯ, ಮೂರು ಜನ ಕಾನಸ್ಟೆಬಲ್ಸಗೆ ಕೊರೋನಾ ಪಾಸಿಟಿವ್

ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂರು ಜನ ಕಾನಸ್ಟೆಬಲ್ ರವರಿಗೆ ಕೋವಿಡ್-19 ಸೋಂಕು ಧೃಡಪಟ್ಟಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದ್ದಾರೆ.

ಅವರನ್ನು ರಾಯಚೂರು ನಗರದ ಒಪ್ಯಾಕ್ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಹಂತದಲ್ಲಿ ಸಂಪರ್ಕದಲ್ಲಿರುವವರಿಗಾಗಿ ಮಾಹಿತಿ ಪಡೆಯಲಾಗುತ್ತಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆಗೆ ಸ್ಯಾನಿಟೆಜ ಮಾಡಿಸಲು ಕ್ರಮಕೈಗೊಳ್ಳಲಾಗಿದೆ. ಪಾಸಿಟಿವ್ ಬಂದಿರುವ ಹಿನ್ನಲೆ ಪಶ್ಚಿಮ ಠಾಣೆಯ ಸರಹದ್ದಿನ ದೂರುದಾರರು ತಾತ್ಕಾಲಿಕವಾಗಿ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ನೀಡುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಸಿ ಬಿ ವೇದಮೂರ್ತಿ ತಿಳಿಸಿದ್ದಾರೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close