ಅಂತರಾಷ್ಟ್ರೀಯ

ಬ್ರೆಕೀಂಗ್ ನ್ಯೂಸ್ ; ಭಾರತದಲ್ಲಿ ಒಂದೇ ದಿನ 9.8 ಸಾವಿರ ಕೊರೋನಾ ಪ್ರಕರಣ; ಎರಡೂಕಾಲು ಲಕ್ಷ ದಾಟಿದ ಸೋಂಕಿತರ ಸಂಖ್ಯೆ

Posted By: Sirajuddin Bangar

Source:NS18

ನವದೆಹಲಿ (ಜೂ): ಕೊರೊನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ, ಸೋಂಕು ಹರಡುವಿಕೆ ತೀವ್ರವಾಗಿರುವಾಗ ಹೆಸರಿಗೆ ಮಾತ್ರ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ  ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಮೇ 30ರಿಂದ 8 ಸಾವಿರಕ್ಕೂ‌ ಹೆಚ್ಚು ಕೊರೋನಾ ಪ್ರಕರಣಗಳು ಕಂಡುಬರುತ್ತಿದ್ದವು. ನಾಲ್ಕೇ ದಿನಕ್ಕೆ ದಿನವೊಂದರಲ್ಲಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು ಗೋಚರಿಸಲು ಆರಂಭವಾಗಿದೆ. ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ ಎರಡೂಕಾಲು ಲಕ್ಷ ದಾಟಿದೆ.

ಕಳೆದ ವಾರ ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿತ್ತು. ಮೇ 30ರಿಂದ 8 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಈಗ ಗುರುವಾರ ಒಂದೇ ದಿನ ದೇಶದಲ್ಲಿ 9,851 ಪ್ರಕರಣಗಳು ಕಂಡುಬಂದಿವೆ. ಇದರಿಂದ ಭಾರತದ ಕೊರೋನಾ ವೈರಸ್ ಪೀಡಿತರ ಸಂಖ್ಯೆ 2,26,770ಕ್ಕೆ ಏರಿಕೆಯಾಗಿದೆ.

‌ಗುರುವಾರ ಒಂದೇ ದಿನ ಕೊರೊನಾದಿಂದ 273 ಜನ ಮೃತಪಟ್ಟಿದ್ದು, ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 6 ಸಾವಿರದ ಗಡಿ ದಾಟಿದೆ. ಸದ್ಯ ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 6,348ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಈವರೆಗೆ 1,09,462 ಜನ ಮಾತ್ರ  ಗುಣಮುಖ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಗಳು ತಿಳಿಸಿವೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ  ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌ ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392, ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304 ಹಾಗೂ ಜೂನ್ 4ರಂದು 9,851 ಹೊಸ ಪ್ರಕರಣಗಳು ಪತ್ತೆಯಾಗಿವೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close