ಕರ್ನಾಟಕ ಸುದ್ದಿ

ಹಂಪಿಯಲ್ಲಿ 4.0 ತೀವ್ರತೆಯ ಭೂಕಂಪ ಆಗಿದೆ ಎಂಬುದು ನಿಜವಲ್ಲ; ಜಿಲ್ಲಾಧಿಕಾರಿ ಸ್ಪಷ್ಟನೆ

–ಸಿರಾಜುದ್ದೀನ್ ಬಂಗಾರ್ ಸಂಪಾದಕರು ಕರ್ನಾಟಕ-ಜ್ವಾಲೆ ನ್ಯೂಸ್

Hampi Earthquake: ಇಂದು ಮುಂಜಾನೆ 6.55ರ ಸುಮಾರಿಗೆ ಹಂಪೆ ಭಾಗದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪನದ ತೀವ್ರತೆ ಶೇ. 4.0 ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಇಲಾಖೆ ತಿಳಿಸಿತ್ತು. ಆದರೆ, ಇದು ನಿಜವಲ್ಲ ಎಂದು ಬಳ್ಳಾರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ ಹಂಪಿಯಲ್ಲಿ ಇಂದು ಮುಂಜಾನೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಆ ರೀತಿ ಆಗಿಲ್ಲ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. 

ಇಂದು ಮುಂಜಾನೆ 6.55ರ ಸುಮಾರಿಗೆ ಹಂಪಿ ಭಾಗದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್​ ಮಾಪಕದಲ್ಲಿ ಭೂಕಂಪನದ ತೀವ್ರತೆ ಶೇ. 4.0 ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದವರು ತಿಳಿಸಿದ್ದರು. ಆದರೆ, ಇದು ಸುಳ್ಳು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ದಿನಗಳ ಹಿಂದೆ ಹರಿಯಾಣದ ರೋಹ್ಟಕ್​ನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು. ದೇಹಲಿಯಂದ ಕೇವಲ 60 ಕಿಮೀ ದೂರದಲ್ಲಿ ಈ ನಗರವಿದೆ. ಕಳೆದ ಒಂದುವರೆ ತಿಂಗಳಿಂದ ದೆಹಲಿ ಭಾಗದಲ್ಲಿ  ಚಿಕ್ಕ ಪ್ರಮಾಣದಲ್ಲಿ ಭೂಮಿ ಕಂಪಿಸುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಮಿ ಕಂಪಿಸಬಹುದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ತಿಳಿಸಿದೆ.

1336ರಿಂದ 1565ರವರೆಗೆ ಹಂಪಿ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು ಪಂಪಾ. ಅಂದರೆ ತುಂಗಭದ್ರ ನದಿ ಎಂದರ್ಥ. ವರ್ಷಗಳು ಕಳೆದಂತೆ ಇದು ವಿಜಯನಗರ ಮತ್ತು ವಿರುಪಾಕ್ಷಪುರ ಎಂದು ಕರೆಯಲ್ಪಟ್ಟಿತು. ಹಂಪಿಯನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಎಂದು ಘೋಷಿಸಲಾಗಿದೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close