ಅಂತರಾಷ್ಟ್ರೀಯ

ಬ್ರೆಕೀಂಗ್ ನ್ಯೂಸ್ ; ಭಾರತದಲ್ಲಿ ದಿನಕ್ಕೆ 15 ಸಾವಿರ ಮಂದಿಗೆ ಕೊರೋನಾ ಬರುತ್ತೆ; ಹೊರಬಿತ್ತು ಶಾಕಿಂಗ್ ಸುದ್ದಿ

Posted By: Sirajuddin Bangar

Source:NS18

ನವದೆಹಲಿ(ಜೂ.06): ದೇಶದಲ್ಲಿ ದಿನದಿಂದ ದಿನಕ್ಕೆ ಅನ್ ಲಾಕ್ ಆಗುತ್ತಿದೆ. ಪ್ರತಿನಿತ್ಯ 9 ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದರ ನಡುವೆ ಈಗ ಇದೇ ಜೂನ್ ಮಧ್ಯ ಭಾಗದಲ್ಲಿ ಪ್ರತಿನಿತ್ಯವೂ 15 ಸಾವಿರಕ್ಕೂ‌ಹೆಚ್ಚು ಪ್ರಕರಣಗಳು ಪತ್ತೆಯಾಗಲಿವೆ ಎಂಬ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಇಂಥ ಆಘಾತಕಾರಿ ಸುದ್ದಿ ಬಂದಿರುವುದು ಚೀನಾದಿಂದ ಎಂಬುದು ಕುತೂಹಲಕಾರಿ ವಿಷಯ.

ಒಂದು ರೀತಿಯಲ್ಲಿ ಸದ್ಯದ ಕೊರೋನಾ ಆರ್ಭಟವನ್ನೇ ಭಾರತ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗಷ್ಟೇ ದೆಹಲಿ ಸರ್ಕಾರ ತನ್ನ ಜಿಲ್ಲಾಡಳಿತಗಳಿಗೆ ಕೊರೋನಾ ಚಿಕಿತ್ಸೆಗೆ ಹೆಚ್ಚುವರಿ ಬೆಡ್ ಹುಡುಕಿ ಮತ್ತು ಕೊರೋನಾದಿಂದ ಸತ್ತವರ ಅಂತ್ಯ ಸಂಸ್ಕಾರಕ್ಕಾಗಿ ಸ್ಮಶಾನ ಗುರುತಿಸಿ ಎಂದು ಹೇಳಿತ್ತು. ಈ ನಡುವೆ ಪ್ರತಿನಿತ್ಯವೂ 15 ಸಾವಿರಕ್ಕೂ‌ಹೆಚ್ಚು ಪ್ರಕರಣಗಳು ಪತ್ತೆಯಾಗಲಿವೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿರುವ ಲ್ಯಾಂಜೋ ವಿಶ್ವವಿದ್ಯಾಲಯದ ತಜ್ಞರು ಇಂಥ ಮೈನಡುಗಿಸುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಲ್ಯಾಂಜೋ ವಿಶ್ವವಿದ್ಯಾಲಯವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಸೋಂಕು ಹರಡುವಿಕೆಯ ಪ್ರಮಾಣದ ಬಗ್ಗೆ ಸಂಶೋಧನೆ ನಡೆಸುತ್ತಿದೆ.

ಗ್ಲೋಬಲ್ ಕೋವಿಡ್ -19 ಪ್ರಿಡಿಕ್ಟ್ ಸಿಸ್ಟಮ್ ಎಂಬ ಹೆಸರಿನಲ್ಲಿ ಸಂಶೋಧನೆ ನಡೆಸುತ್ತಿರುವ ಲ್ಯಾಂಜೋ ವಿಶ್ವವಿದ್ಯಾಲಯದ ತಜ್ಞರು 180 ದೇಶಗಳಿಗೆ ದೈನಂದಿನ ಮುನ್ಸೂಚನೆಯನ್ನು ನೀಡುತ್ತಿದ್ದಾರೆ. ಆ ಪೈಕಿ ಭಾರತದ ಪರಿಸ್ಥಿತಿಯ ಬಗ್ಗೆಯೂ ಅಂದಾಜು ಮಾಡುತ್ತಿದ್ದಾರೆ. ಈ ಹಿಂದೆ ಭಾರತದಲ್ಲಿ ಜೂನ್ ಆರಂಭದಲ್ಲಿ ಪ್ರತಿನಿತ್ಯ 9 ಸಾವಿರಕ್ಕೂ ಹೊಸ ಪ್ರಕರಣಗಳು ಪತ್ತೆಯಾಗಲಿವೆ ಎಂದು ಭವಿಷ್ಯ ನುಡಿದಿದ್ದರು. ಅದಕ್ಕೆ ತಕ್ಕಂತೆ ಭಾರತದಲ್ಲಿ ಜೂನ್ 3ರಿಂದ ಪ್ರತಿದಿನ 9 ಸಾವಿರಕ್ಕೂ ಹೆಚ್ಚು‌ ಜನರಲ್ಲಿ‌ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿದೆ.

ಇದಲ್ಲದೆ ಲ್ಯಾಂಜೋ ವಿಶ್ವವಿದ್ಯಾಲಯದ ತಜ್ಞರು ಲಾಕ್​ಡೌನ್​​ ನಿಯಮಗಳನ್ನು ಹಂತ-ಹಂತವಾಗಿ ಸಡಿಲಿಸುತ್ತಿರುವುದರಿಂದ ಕ್ರಮೇಣವಾಗಿ ಕೊರೋನಾ ಸೋಂಕು ಮತ್ತಷ್ಟು ಉಲ್ಬಣಗೊಳ್ಳಲಿದೆ. ಲಾಕ್​ಡೌನ್​​ ನಿಯಮಾವಳಿಗಳಿಗೆ ವಿನಾಯಿತಿ ನೀಡುವುದರಿಂದ ಸಾಮಾಜಿಕ ಅಂತರ ಹಾಗೂ ಕೊರೋನಾ ಮುನ್ನೆಚ್ಚರಿಕೆ ಕ್ರಮಗಳು ಪಾಲನೆಯಾಗುವುದು ಅನುಮಾನ. ಇದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕೂಡ ಭವಿಷ್ಯ ನುಡಿದಿದ್ದಾರೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close