ಕರ್ನಾಟಕ ಸುದ್ದಿ

ರಾಜ್ಯಸಭಾ ಚುನಾವಣೆ : ಇಂದು ನಾಮಪತ್ರ ಸಲ್ಲಿಸಲಿರುವ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು

Posted By: Sirajuddin Bangar

Source: NS18

ಬೆಂಗಳೂರು(ಜೂ. 09): ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಹಾಗೂ ಅಶೋಕ ಗಸ್ತಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ‌ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಇದೇ ವೇಳೆ‌ ನಾಲ್ಕನೇ ಅಭ್ಯರ್ಥಿಯಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೂಡ ನಾಮಪತ್ರ ಸಲ್ಲಿಸಲಿದ್ದಾರೆ. 

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಆಶ್ಚರ್ಯಕರ ರೀತಿಯಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಈ ಮೂಲಕ ರಾಜ್ಯ ಬಿಜೆಪಿ ಮುಖಂಡರಿಗೆ ಮತ್ತು ಪ್ರಬಲ ಆಕಾಂಕ್ಷಿ ಗಳಿಗೆ ಶಾಕ್ ನೀಡಿದೆ. ಬೆಳಗಾವಿ ನಗರಾಧ್ಯಕ್ಷ ಈರಣ್ಣ ಕಡಾಡಿ ಹಾಗೂ ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಗಸ್ತಿ. ಇಬ್ಬರ ಹೆಸರನ್ನು ಆಯ್ಕೆ ಮಾಡಿ ಹೈಕಮಾಂಡ್ ರಾಜ್ಯಕ್ಕೆ ಕಳುಹಿಸಿದೆ.

ಈರಣ್ಣ ಕಡಾಡಿ ಮಾತನಾಡಿ ಪಕ್ಷ ನನ್ನನ್ನ ಗುರುತಿಸಿ ಒಂದು ಅವಕಾಶ ನೀಡಿದೆ. ಆಕಾಂಕ್ಷಿಗಳಾದವರು ಕೂಡ ನಮ್ಮ ಪಕ್ಷದ ಮುಖಂಡರೇ ಆಗಿದ್ದಾರೆ. ನನಗೂ ಪಕ್ಷ ಯಾವುದಾದರೂ ಹುದ್ದೆ ನೀಡಬಹುದು ಎನ್ನುವ ನಂಬಿಕೆ ಇತ್ತು. ಈಗ ಅವಕಾಶ ನೀಡಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಇಬ್ಬರು ಆಶೀರ್ವಾದ ಪಡೆದರು. ಬಳಿಕ ಅಶೋಕ ಗಸ್ತಿ ಹಾಗೂ ಈರಣ್ಣ ಕಡಾಡಿ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ನಳೀನ್​​ ಕುಮಾರ ಕಟೀಲರನ್ನು ಭೇಟಿ ಮಾಡಿದರು. ಬಳಿಕ ವಿಧಾನಸೌದಕ್ಕೆ ಮುಖಂಡರೊಂದಿಗೆ ತೆರಳಿ‌ ನಾಮಪತ್ರ ಸಲ್ಲಿಸಲಿದ್ದಾರೆ.

ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆದರೆ, ಇಂದು ಮೂವರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ರೆ ಚುನಾವಣೆ ನಡೆಯುವುದು ಅನುಮಾನವಾಗಿದೆ. ಎಲ್ಲರು ಅವಿರೋಧವಾಗಿ ಅಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close