ರಾಯಚೂರು ಜಿಲ್ಲೆ ಸುದ್ದಿ

ರಾಯಚೂರಿನ ಕೊರೋನಾ ರೋಗಿಗೆ ಗರ್ಭಪಾತ; ವೈದ್ಯರ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ

ಕೊರೋನಾ ಪಾಸಿಟಿವ್ ಇರುವ ರಾಯಚೂರಿನ ಗರ್ಭಿಣಿಯೊಬ್ಬರಿಗೆ ನಿನ್ನೆ ಹೊಟ್ಟೆಯಲ್ಲಿಯೇ ಮಗು ಸತ್ತು, ಗರ್ಭಪಾತವಾಗಿದೆ. ಇಲ್ಲಿ ಸರಿಯಾದ ಸಮಯಕ್ಕೆ ವೈದ್ಯರು ಪರೀಕ್ಷೆ ಬರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಮಹಾರಾಷ್ಟ್ರದಿಂದ ಬಂದಿದ್ದ 35 ವರ್ಷದ ದೇವದುರ್ಗ ತಾಲೂಕಿನ ಮಹಿಳೆಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆಕೆ ಮೇ 23ರಂದು ರಾಯಚೂರಿನ ಓಪೆಕ್ ಆಸ್ಪತ್ರೆಗೆ ದಾಖಲಾಗಿದ್ದಳು. ಆಕೆ 3 ತಿಂಗಳ ಗರ್ಭಿಣಿಯಾಗಿದ್ದಳು

.ಆಕೆಗೆ ಜೂ 6ರಂದು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಸೋಮವಾರ ಮುಂಜಾನೆಯೇ ಆಕೆಗೆ ತೀವ್ರ ರಕ್ತಸ್ರಾವವಾಗಿತ್ತು. ಈ ಸಂದರ್ಭದಲ್ಲಿ ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿ ಗರ್ಭಪಾತವಾಗಿತ್ತು. ಇದೇ ಸಂದರ್ಭದಲ್ಲಿ ಇದೇ ವಾರ್ಡಿನಲ್ಲಿದ್ದ ಆಕೆಯ ಸಂಬಂಧಿಕರು 14 ಜನರಿದ್ದು, ಅವರು ವೈದ್ಯರಿಗೆ ತಿಳಿಸಿದರೂ ವೈದ್ಯರು ಬಂದಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮಹಿಳೆಗೆ ಗರ್ಭಪಾತವಾಗಿ, ರಕ್ತಸ್ರಾವವಾಗಿದ್ದರಿಂದ ಓಪೆಕ್ ಆಸ್ಪತ್ರೆಯಲ್ಲಿದ್ದ ಇತರ ಪಾಸಿಟಿವ್ ಬಂದಿರುವವರೆಲ್ಲರೂ ಪ್ರತಿಭಟನೆ ನಡೆಸಿದ್ದಾರೆ.ಇಲ್ಲಿ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ, ರಕ್ತಸ್ರಾವವಾದರೂ ವೈದ್ಯರು ಬರುತ್ತಿಲ್ಲ ಎಂದು ಸೋಮವಾರ ಮಧ್ಯಾಹ್ನದ ಊಟ ಬಿಟ್ಟು ಪ್ರತಿಭಟನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಬಂದ ವೈದ್ಯರು ಹಾಗು ಸಿಬ್ಬಂದಿ ಆಕೆಯನ್ನು ರಿಮ್ಸ್ ಗೆ ದಾಖಲಿಸಿಕೊಂಡಿದ್ದಾರೆ. ಆಕೆ ಈಗ ಚೇತರಿಸಿಕೊಳ್ಳುತ್ತಿದ್ದಾಳೆ. ಓಪೆಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಈ ಘಟನೆಗೆ ಸಾಕ್ಷಿಯಾಗಿದೆ. ಈ‌ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಹಾಗೂ ರಿಮ್ಸ್ ಡೀನ್ ಬಸವರಾಜ ಪೀರಾಪುರೆ ಆಕೆಗೆ ಜೂ. 6ರಿಂದಲೇ ಚಿಕಿತ್ಸೆ ನೀಡಲಾಗುತ್ತಿತ್ತು, ಆಕೆಗೆ ಹೈಪರ್ ಥೈರಾಯಿಡ್ ಸಮಸ್ಯೆ ಇದೆ, ಇದರಿಂದ ಗರ್ಭಪಾತವಾಗಿದೆ. ಆಕೆಗೆ ಇದು ಮೂರನೆಯ ಗರ್ಭವಾಗಿದ್ದು, ಈ ಎಲ್ಲಾ ಕಾರಣಕ್ಕೆ ಗರ್ಭಪಾತವಾಗಿದೆ. ಆದರೂ ವೈದ್ಯರ ನಿರ್ಲಕ್ಷ್ಯದ ಬಗ್ಗೆ ತಜ್ಞರಿಂದ ವರದಿ ತರಿಸಿಕೊಂಡು ತಪ್ಪಿತಸ್ಥರಾಗಿದ್ದರೆ ಕ್ರಮ ಕೈಗೊಳ್ಳಲಾಗಗುವುದು ಎಂದಿದ್ದಾರೆ.

ಈ ಮಧ್ಯೆ ಈ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕಾಗಿ ರಿಮ್ಸ್ ವೈದ್ಯರ ಅಮಾನತು ಮಾಡಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಉಡುಪಿಯಲ್ಲಿ ಹೇಳಿಕೆ ನೀಡಿದ್ದರು. ಆದರೆ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಮಾನತು ಬಗ್ಗೆ ಮಾಹಿತಿ ಬಂದಿಲ್ಲ ಎಂದು ರಿಮ್ಸ್ ಡೀನ್ ಹೇಳಿದ್ದಾರೆ. ಕೊರೋನಾ ಪಾಸಿಟಿವ್ ಬಂದಿರುವವರಿಗೆ ಸರಿಯಾದ ಚಿಕಿತ್ಸೆ ಸಿಗದೆ ಈ ರೀತಿ ತೊಂದರೆಗಳಾಗುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ

Continue

Related Articles

Leave a Reply

Your email address will not be published. Required fields are marked *

Back to top button
Close
Close