ಕರ್ನಾಟಕ ಸುದ್ದಿ

ಕರ್ನಾಟಕದಲ್ಲಿ ಇಂದು ಒಂದೇ ದಿನ 204 ಕೊರೋನ ಕೇಸ್, 3 ಸಾವು

ಸಂಪಾದಕರು : ಸಿರಾಜುದ್ದೀನ್ ಬಂಗಾರ್, ಸಿರವಾರ

ಕರ್ನಾಟಕದಲ್ಲಿಂದು 204 ಮಂದಿಗೆ ಕೋವಿಡ್​​-19 ಸೋಂಕು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯೂ 6245ಕ್ಕೆ ಏರಿಕೆಯಾಗಿದೆ. ಸದ್ಯ 6,245 ಮಂದಿ ಸೋಂಕಿತರ ಪೈಕಿ 2976 ಜನ ಸಂಪೂರ್ಣ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಪ್ರಸ್ತುತ 3,195 ಆ್ಯಕ್ಟೀವ್​ ಕೇಸುಗಳಿವೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್​​ ಬುಲೆಟಿನ್​ನಿಂದ ತಿಳಿದು ಬಂದಿದೆ.

ರಾಜ್ಯ ಸರ್ಕಾರದ ಪ್ರಕಾರ, ಇಂದಿನ 204 ಕೋವಿಡ್​​-19 ಕೇಸುಗಳ ಪೈಕಿ ಯಾದಗಿರಿ 66, ಉಡುಪಿ 22, ಬೆಂಗಳೂರು ನಗರ 17, ಕಲಬುರ್ಗಿ  16, ರಾಯಚೂರು 15, ಬೀದರ್ 14, ಶಿವಮೊಗ್ಗ 10, ದಾವಣೆಗೆರೆ 9, ಕೋಲಾರ 6, ಮೈಸೂರು 5, ರಾಮನಗರ 5, ವಿಜಯಪುರ 4, ಬಾಗಲಕೋಟೆ 3, ಉತ್ತರಕನ್ನಡ 3, ದಕ್ಷಿಣ ಕನ್ನಡ 2, ಹಾಸನ 2, ಧಾರವಾಡದಲ್ಲಿ 2 ಪ್ರಕರಣಗಳು ದಾಖಲಾಗಿವೆ. ಹಾಗೆಯೇ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಪ್ಪಳದಲ್ಲಿ ತಲಾ ಒಂದೊಂದು ಕೊರೋನಾ ಕೇಸ್ ಪತ್ತೆಯಾಗಿದೆ.

ಕೊರೋನಾ ವೈರಸ್​ಗೆ ಇಂದು ಮೂವರು ಅಸುನೀಗಿದ್ದಾರೆ. ಈ ಮೂಲಕ ರಾಜ್ಯದ ಮೃತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಹೀಗಾಗಿ ಜನರಲ್ಲಿ ಇನ್ನಷ್ಟು ಭೀತಿ ಹೆಚ್ಚಾಗಿದೆ.

ಮೇ 30 ರಿಂದ ಭಾರತದಲ್ಲಿ ಪ್ರತಿನಿತ್ಯ 8 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಲು ಆರಂಭಿಸಿದವು. ಜೂನ್‌ 3 ರಿಂದ ದಿನವೊಂದರಲ್ಲಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು ಗೋಚರಿಸಲು ಆರಂಭವಾದವು. ಈಗ ದಿನವೊಂದರಲ್ಲಿ ಸುಮಾರು 10 ಸಾವಿರ ಪ್ರಕರಣಗಳು ಪತ್ತೆಯಾಗಿವೆ.

ಬುಧವಾರ 9,996 ಪ್ರಕರಣಗಳು ಕಂಡುಬಂದಿವೆ. ಇದರಿಂದ ದೇಶದ ಕೊರೋನಾ ವೈರಸ್ ಪೀಡಿತರ ಸಂಖ್ಯೆ 2,86,579ಕ್ಕೆ ಏರಿಕೆಯಾಗಿದೆ. ಇದರಿಂದ ಜಾಗತಿಕವಾಗಿ ಅತಿಹೆಚ್ಚು ಕೊರೋನಾ ಇರುವ ದೇಶಗಳ ಪಟ್ಟಿಯಲ್ಲಿ 5ನೇ ಸ್ಥಾನದ ಸನಿಹ ಬಂದಿದೆ. ಏಕೆಂದರೆ 5ನೇ ಸ್ಥಾನದಲ್ಲಿರುವ ಸ್ಪೇನ್ ಕೊರೋನಾ ಪೀಡಿತರ ಸಂಖ್ಯೆ 2,89,360 ಆಗಿದೆ. ಭಾರತ ಮತ್ತು ಸ್ಪೇನ್ ನಡುವೆ ಇರುವ ವ್ಯತ್ಯಾದ ಸುಮಾರು 3 ಸಾವಿರ ಮಾತ್ರ.

Continue

Related Articles

Leave a Reply

Your email address will not be published. Required fields are marked *

Back to top button
Close
Close