ರಾಯಚೂರು ಜಿಲ್ಲೆ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ – ಬಿ.ಎಚ್‌.ಗೋನಾಳ

ವರದಿ : ಸಿರಾಜುದ್ದೀನ್ ಬಂಗಾರ್

ರಾಯಚೂರು: ಬಾರಿ ಯಾವುದೇ ಕಾರಣಕ್ಕೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದು ಕೋವಿಡ್ ಸುರಕ್ಷತೆ ಮಾರ್ಗಸೂಚಿಯೊಂದಿಗೆ ನಕಲು ಮುಕ್ತ ಹಾಗೂ ಶಿಸ್ತು ಬದ್ಧವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕೋವಿಡ್ ವೈರಸ್‌ ಭೀತಿ ಮಧ್ಯೆಯು ಜೂ.25ರಿಂದ ಜು.4ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಡಿಡಿಪಿಐ ಬಿ.ಎಚ್‌.ಗೋನಾಳ ತಿಳಿಸಿದರು.

ನಗರದ ಆಕಾಶವಾಣಿ ಕೇಂದ್ರದಲ್ಲಿ ಕೋವಿಡ್‌-19 ಸಂಕಷ್ಟದ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪೂರ್ವ ಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೋವಿಡ್‌ ಸೋಂಕಿನ ಭೀತಿಯಲ್ಲೂ ಪರೀಕ್ಷೆ ಬರೆಯುವ ಮಕ್ಕಳು ಯಾವುದೇ ಭಯಕ್ಕೆ ಒಳಗಾಗದೆ ಧೈರ್ಯದಿಂದ ಪರೀಕ್ಷೆ ಎದುರಿಸಬೇಕು. ಶಿಕ್ಷಣ ಇಲಾಖೆ ಎಲ್ಲ ರೀತಿಯಿಂದಲೂ ಪೂರ್ವ ತಯಾರಿ ಮಾಡಿಕೊಂಡಿದೆ ಎಂದರು.

ಮಕ್ಕಳಿಗೆ ಮಾಸ್ಕ್ಗಳನ್ನು ನೀಡಲಾಗುವುದು, ಸ್ಯಾನಿಟೈಜರ್‌ ಮತ್ತು ಥರ್ಮಲ್‌ ಸ್ಕ್ರೀನಿಂಗ್‌ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಪರೀಕ್ಷೆ ನಡೆಸಲಾಗುವುದು. ಜ್ವರ, ಕೆಮ್ಮು, ನೆಗಡಿ ಇರುವ ಮಕ್ಕಳಿಗಾಗಿ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು ಭಯ ಭೀತರಾಗದೆ ಪರೀಕ್ಷೆ ಎದುರಿಸಬೇಕು ಎಂದರು. ಆಕಾಶವಾಣಿ ಪ್ರಸಾರ ನಿರ್ವಾಹಕ ವೆಂಕಟೇಶ ಬೇವಿನಬೆಂಚಿ ಸಂದರ್ಶಿಸಿದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close