ಸಿನಿಮಾ ಸುದ್ದಿ

ಬ್ರೇಕಿಂಗ್ ನ್ಯೂಸ್;ಬಾಲಿವುಡ್​ ನಟ ಸುಶಾಂತ್ ಸಿಂಗ್ ರಜಪೂತ್ ನಿಧನ

Posted by :Sirajuddin Bangar

Source:NS18

ಬಾಲಿವುಡ್​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಹಲವಾರು ಬಾಲಿವುಡ್ ಸಿನಿಮಾದಲ್ಲಿ ನಟಿಸಿದ್ದ ಸುಶಾಂತ್ ಸಿಂಗ್ ಸಾವು ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ. ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಬಾಲಿವುಡ್​ ನಟ ಇರ್ಫಾನ್​ ಖಾನ್​ ಸಾವಿನ ಬೆನ್ನಲ್ಲೇ ಮತ್ತೋರ್ವ ನಟ ಸಾವನ್ನಪ್ಪಿರುವುದು ಬಾಲಿವುಡ್​ ಮಂದಿಗೂ ಆಘಾತ ಉಂಟುಮಾಡಿದೆ.

ಧಾರಾವಾಹಿ ನಟನಾಗಿ ಅಭಿನಯವನ್ನು ಶುರು ಮಾಡಿದ್ದ ಸುಶಾಂತ್ ಸಿಂಗ್ ಬಳಿಕ ಸಾಲು ಸಾಲು ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದರು. ಕಾಯ್ ಪೋ ಚೆ, ಶುದ್ಧ ದೇಸಿ ರೊಮ್ಯಾನ್ಸ್, ಪಿಕೆ, ಎಂ.ಎಸ್. ಧೋಣಿ, ರಾಬ್ಟಾ, ಕೇದಾರನಾಥ್ ಮುಂತಾದ ಹಿಟ್ ಸಿನಿಮಾಗಳಲ್ಲಿ ಸುಶಾಂತ್ ಸಿಂಗ್ ನಾಯಕನಾಗಿ ಅಭಿನಯಿಸಿದ್ದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close