ಅಂತರಾಷ್ಟ್ರೀಯ

ಬ್ರೇಕಿಂಗ್ ನ್ಯೂಸ್;ಭಾರತ-ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ; ಓರ್ವ ಸೈನಿಕ ಹುತಾತ್ಮ

Posted by: Sirajuddin Bangar

Source: NS18

ಜಮ್ಮು (ಜೂ.14): ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಮ್ಮ ಸೇನೆಯ ಓರ್ವ ಯೋಧ ಹುತಾತ್ಮನಾಗಿದ್ದು, ಮೂರಕ್ಕೂ ಹೆಚ್ಚು ಸೈನಿಕರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಪೂಂಚ್​ ಸಮೀಪ ಹಾದು ಹೋದ ಗಡಿ ನಿಯಂತ್ರಣ ರೇಖೆ ಸಮೀಪ ಪಾಕಿಸ್ತಾನ ಸೈನಿಕರು ನಿರಂತರವಾಗಿ ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಭಾರತೀಯ ಸೈನಿಕನಿಗೆ ಗುಂಡು ತಗುಲಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಗಾಯಗೊಂಡ ಮೂವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜೂನ್​ ತಿಂಗಳಲ್ಲಿ ಪಾಕಿಸ್ತಾನ ಈ ರೀತಿ ಗುಂಡಿನ ದಾಳಿ ನಡೆಸುತ್ತಿರುವುದು ಇದು ಮೂರನೇ ಬಾರಿಯಾಗಿದೆ. ಇನ್ನು, ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿರುವ ಭಾರತ, ಪ್ರತಿದಾಳಿ ನಡೆಸಿದೆ. ಈ ವೇಳೆ ಅಲ್ಲಿಯ ಕೆಲ ಸೈನಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ಉಗ್ರರನ್ನು ಮಟ್ಟ ಹಾಕಲು ನಿರಂತರ ಕಾರ್ಯಾಚಾರಣೆ ನಡೆಸುತ್ತಿದೆ. ಕಳೆದ ಭಾನುವಾರದಿಂದ ಇಲ್ಲಿಯವರೆಗೆ ಒಟ್ಟು 11 ಉಗ್ರರರನ್ನು ಹತ್ಯೆ ಮಾಡಲಾಗಿದೆ. ಕಳೆದ ಭಾನುವಾರ ಶೋಫಿಯಾನಾ ಭಾಗದಲ್ಲಿ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಸಂಘಟನೆಯ ಐವರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದರು. ಸೋಮವಾರ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಬುಧವಾರ ಇಬ್ಬರನ್ನು ಹತ್ಯೆಗೈಯಲಾಗಿದೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close