ಕರ್ನಾಟಕ ಸುದ್ದಿ

ಕೊರೋನ ನಿಯಂತ್ರಣಕ್ಕೆ ರಾಜ್ಯದ ಕ್ರಮವೇನು?ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಯಡಿಯೂರಪ್ಪ

ಸಂಪಾದಕೀಯ : ಸಿರಾಜುದ್ದೀನ್ ಬಂಗಾರ್ ಸಿರವಾರ

ಕರ್ನಾಟದಲ್ಲಿ ಪ್ರಸ್ತುತ ಕೋವಿಡ್-19 ಸ್ಥಿತಿಗತಿ ಏನು? ಈ ಮಾರಣಾಂತಿಕ ಖಾಯಿಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳೇನು? ಸೋಂಕು ಪೀಡಿತರಿಗೆ ಎಂತಹಾ ಚಿಕಿತ್ಸೆ ನೀಡಲಾಗುತ್ತಿದೆ? ಮತ್ತು ರಾಜ್ಯದ ಬೇಡಿಕೆ ಏನು? ಹೀಗೆ ಎಲ್ಲಾ ವಿಚಾರನ್ನು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರದಲ್ಲಿ ಮಾರಣಾಂತಿಕ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪರಿಣಾಮ ಈ ವೈರಸ್ ಅನ್ನು ನಿಯಂತ್ರಿಸುವ ಕುರಿರು ಪ್ರಧಾನಿ ನರೇಂದ್ರ ಮೋದಿ ನಿನ್ನೆಯಿಂದ ಎಲ್ಲಾ ರಾಜ್ಯದ ಸಿಎಂಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸುತ್ತಿದ್ದಾರೆ. ಇಂದು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿಯೂ ಚರ್ಚೆ ನಡೆಸಿದ್ದಾರೆ.

ಈ ವೇಳೆ ರಾಜ್ಯದ ಕೊರೋನಾ ಸ್ಥಿತಿಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿರುವ ಯಡಿಯೂರಪ್ಪ, “ಸೋಂಕಿತರು, ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡಲು ತಂತ್ರಜ್ಞಾನ ಅಳವಡಿಸಲಾಗಿದೆ. ಒಂದು ಲಕ್ಷ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯ ಮೂಲಸೌಕರ್ಯಕ್ಕೆ ಕ್ರಮ ಕೈಗೊಳ್ಳಲಾಗಿದ್ದು,ಇದನ್ನು 2 ಲಕ್ಷಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗಿದೆ.

ರಾಜ್ಯದಲ್ಲಿ 673 ಫೀವರ್ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ಆಸ್ಪತ್ರೆಗಳು ಸೋಂಕು ಹರಡುವ ತಾಣವಾಗದಂತೆ ಮುನ್ನೆಚ್ಚರಿಕೆವಹಿಸಲಾಗಿದೆ. ರಾಜ್ಯದಲ್ಲಿರುವ 1.68 ಕೋಟಿ ಕುಟುಂಬಗಳ ಪೈಕಿ 1.5 ಕೋಟಿ ಕುಟುಂಬಗಳ ಸಮೀಕ್ಷೆ ನಡೆಸಲಾಗಿದೆ. ಸೋಂಕಿನಿಂದ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ವ್ಯಕ್ತಿಗಳ ಮಾಹಿತಿಯನ್ನು ದಾಖಲಿಸಲಾಗಿದೆ. ಇದರಿಂದ ಮುನ್ನೆಚ್ಚರಿಕೆ ವಹಿಸಲು ಹಾಗೂ ಇಂತಹ ವ್ಯಕ್ತಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಾಧ್ಯವಾಗಿದೆ” ಎಂದು ತಿಳಿಸಿದ್ಧಾರೆ ಎಂದು ತಿಳಿದುಬಂದಿದೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close