ಕರ್ನಾಟಕ ಸುದ್ದಿ

ಕರ್ನಾಟಕದ ಇಬ್ಬರೂ ಶಾಸಕರಿಗೆ ಇಂದು ಕೊರೋನ ದೃಢ; ಯಾರಿವರು?

ಸಂಪಾದಕರು : ಸಿರಾಜುದ್ದೀನ್ ಬಂಗಾರ್ ಸಿರವಾರ

ಕರ್ನಾಟಕದ ಮತ್ತೆ ಇಬ್ಬರು ಶಾಸಕರುಗಳಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಶೃಂಗೇರಿಯ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರಿಗೆ ಕೋವಿಡ್19 ದೃಢಪಟ್ಟಿದ್ದು, ಸದ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜೇಗೌಡ ಅವರು ಎನ್‌.ಆರ್‌.ಪುರ, ಶೃಂಗೇರಿ, ಕೊಪ್ಪದಲ್ಲಿ ನಡೆದ ಸಭೆಗಳಲ್ಲಿ ಭಾಗವಹಿಸಿದ್ದ, ಪ್ರಾಥಮಿಕ ಸಂಪರ್ಕದಲ್ಲದ್ದವರ ಮಾಹಿತಿ ಕಲೆಹಾಕಲಾಗುತ್ತಿದೆ.

ಸೇಡಂ ಶಾಸಕನಿಗೂ ವಕ್ಕರಿಸಿದ ಕೊರೋನಾ
ಹೌದು…ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ ‌ಪಾಟೀಲ ತೇಲ್ಕೂರ ಅವರಲ್ಲೂ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. 

ಶಾಸಕರ ಆಪ್ತ ಸಹಾಯಕರಿಗೆ ಎರಡು ದಿನಗಳ ಹಿಂದೆ ಪಾಸಿಟಿವ್ ಬಂದಿದ್ದರಿಂದ ಶಾಸಕರೂ ಪರೀಕ್ಷೆಗೆ ಒಳಗಾಗಿದ್ದರು. ಗುರುವಾರ ಶಾಸಕರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದ್ದು, ಅವರು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close