ಕರ್ನಾಟಕ ಸುದ್ದಿ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

Posted by :Sirajuddin Bangar

Source:NS18

ಬೆಂಗಳೂರು: ರಾಜ್ಯದಲ್ಲಿ ನಾಳೆ ( ಜು.14) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ನಾಳೆ  ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ಫಲಿತಾಂಶ ಬಿಡುಗಡೆಯಾಲಿದೆ. ಫಲಿತಾಂಶದ ಮಾಹಿತಿಯನ್ನು  ವಿದ್ಯಾರ್ಥಿಗಳು ಅಥವಾ ಅವರ ಪಾಲಕರ ಮೊಬೈಲ್  ಗೆ ಎಸ್ ಎಂ ಎಸ್ ಮೂಲಕ ಕಳುಹಿಸಿಕೊಡಲಾಗುವುದು ಎಂದರು.

ಕೋವಿಡ್ 19 ಸೋಂಕು ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜಿಗೆ ಭೇಟಿ ನೀಡುವುದು ಬೇಡ. ಎಸ್ ಎಂಎಸ್ ಗಳಲ್ಲಿ ಮಾಹಿತಿ ನೀಡಲಾಗುವುದು ಎಂದು ಸಚಿವರು ಮನವಿ ಮಾಡಿದರು.

ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 4ರಿಂದ ಆರಂಭವಾಗಿತ್ತು. ಮಾರ್ಚ್ ಮೂರನೇ ವಾರದಲ್ಲಿ ಕೋವಿಡ್ ಸಂಕಟ ಹೆಚ್ಚಾದ ಕಾರಣದ ಮಾರ್ಚ್ 23ರಂದು ನಡೆಯಬೇಕಿದ್ದ ಇಂಗ್ಲೀಷ್ ಪರೀಕ್ಷೆಯನ್ನು ಮುಂದೂಡಲಾಗಿತ್ತು. ನಂತರ ಸೂಕ್ತ ಸುರಕ್ಷಿತ ವ್ಯವಸ್ಥೆಯೊಂದಿಗೆ ಜೂನ್ 18ರಂದು ಇಂಗ್ಲೀಷ್ ಪರೀಕ್ಷೆ ನಡೆಸಲಾಗಿತ್ತು.

Continue

Related Articles

Leave a Reply

Your email address will not be published. Required fields are marked *

Back to top button
Close
Close