ರಾಯಚೂರು ಜಿಲ್ಲೆ ಸುದ್ದಿ

ಆಯುಷ್ಮಾನ್ ಭಾರತ್ ಯೋಜನೆ ಸದುಪಯೋಗ ಪಡಿಸಿಕೊಳ್ಳಿ: ಉಮೇಶ ಬಿರಾದರ್

ವರದಿ : ಸಿರಾಜುದ್ದೀನ್ ಬಂಗಾರ್ ಸಂಪಾದಕರು ಸಿರವಾರ

ರಾಯಚೂರು ಜು.22:ಜಿಲ್ಲೆಯ ಪ್ರತಿಯೊಬ್ಬರೂ ಆಯುಷ್ಮಾನ್ ಭಾರತ್ ಯೋಜನೆಯ ಕಾರ್ಡ್ ಮಾಡಿಸಿಕೊಂಡು ಅದರ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಇ-ಗವರ್ನರ್ ಜಿಲ್ಲಾ ಸಂಯೋಜಕರಾದ ಉಮೇಶ ಬಿರಾದರ್ ಅವರು ತಿಳಿಸಿದ್ದಾರೆ.

ಎಲ್ಲರಿಗೂ ಆರೋಗ್ಯ ಎಲ್ಲೆಡೆ ಆರೋಗ್ಯ’ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಜಿಲ್ಲಾ ಹಾಗೂ ಸಮುದಾಯ ಆಸ್ಪತ್ರೆಗಳಲ್ಲಿ ಈ ಯೋಜನೆ ಮೂಲಕ ರಿಯಾಯಿತಿ ದರದಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲಾಗುತ್ತದೆ.

ಈ ಯೊಜನೆಡಿಯಲ್ಲಿ ಬಿಪಿಎಲ್ ಪಡಿತರ ಚೀಟಿದಾರರು ವರ್ಷಕ್ಕೆ 5 ಲಕ್ಷವರೆಗೆ ಉಚಿತ ಚಿಕಿತ್ಸೆ ಪಡೆಯಬುದುದು ಮತ್ತು ಎಪಿಎಲ್ ಕಾರ್ಡದಾರರು ಚಿಕಿತ್ಸೆ ತಗಲುವ ಒಟ್ಟು ಮೊತ್ತದಲ್ಲಿ ಶೇ.30% ರಷ್ಟು ವಾರ್ಷಿಕ ಪ್ರತಿ ಕುಟುಂಬಕ್ಕೆ 1.5 ಲಕ್ಷದವರೆಗೆ ಉಚಿತವಾಗಿ ಸರ್ಕಾರಿ ಹಾಗೂ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವಯನ್ನು ಪಡೆಯಬುದಾಗಿದೆ ಎಂದರು.

ಕಾರಣ ಸಾರ್ವಜನಿಕರು ಈಗಾಗಲೇ ನಿಮ್ಮ ನಿಮ್ಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ CSC ಸೇವಾಕೇಂದ್ರಗಳಲ್ಲಿ ಆಯುಷ್ಮಾನ್ ಕಾರ್ಡ ನೊಂದಾಯಿಸಿಕೊಂಡು ಸರ್ಕಾರದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕರೆ ನೀಡಿದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close