ಕರ್ನಾಟಕ ಸುದ್ದಿ

ಸಿದ್ದು ಸಿಎಂ ಆಗಿದ್ದಿದ್ರೆ ರಾಜ್ಯವನ್ನು ದೇವರಿಂದ ಉಳಿಸಲಾಗ್ತಿರಲಿಲ್ಲ-ನಳಿನ್ ಕುಮಾರ್

ಸಂಪಾದಕೀಯ : ಸಿರಾಜುದ್ದೀನ್ ಬಂಗಾರ್ ಸಿರವಾರ

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ. ವಿನಾಕಾರಣ ವಿರೋಧ ಪಕ್ಷದವರು ಮೆಡಿಕಲ್‌ ಕಿಟ್‌ ಹಗರಣದಲ್ಲಿ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಬೊಬ್ಬೆ ಹಾಕುತ್ತಿದ್ದಾರೆ. ಈ ಸ್ಥಿತಿಯಲ್ಲಿ ಸಿದ್ದರಾಮಯ್ಯ ಏನಾದರು ಮುಖ್ಯಮಂತ್ರಿ ಆಗಿದ್ದರೆ ರಾಜ್ಯವನ್ನು ಆ ಭಗವಂತನಿಂದಲೂ ಉಳಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಗುಡುಗಿದರು.

ಕಾಂಗ್ರೆಸ್‌ ಇಂತಹ ತುರ್ತು ಪರಿಸ್ಥಿತಿಯಲ್ಲಿ ಸಹಕಾರ ನೀಡದೆ ರಾಜಕೀಯ ಮಾಡುತ್ತಿದೆ. ಭ್ರಷ್ಟಾಚಾರದ ಬಗ್ಗೆ ಮಾತಾಡುವವರು ತಿಹಾರ್‌ ಜೈಲಿನಲ್ಲಿ ಏಕೆ ಕುಳಿತುಕೊಂಡಿದ್ದರು ಎಂದು ಛೇಡಿಸಿದರು.

ಬಿಜೆಪಿ ವಿರೋಧ ಪಕ್ಷದಲ್ಲಿ ಇದ್ದಾಗ ತುರ್ತು ಸಂದರ್ಭಗಳಲ್ಲಿ ಸಹಕಾರ ನೀಡಿದೆ. ಆದರೆ ಇವರಿಗೆ ಅಂತಹ ಮನಸ್ಥಿತಿ ಇಲ್ಲದೇ ವೈಯಕ್ತಿಕ ಬೇಳೆ ಬೇಯಿಸಿಕೊಳ್ತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close