ಸಿರವಾರ

ಸಿರವಾರ : ಪ್ರವಾಸಿಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರನಿಗೆ ಕೋವಿಡ್

ಸಂಪಾದಕೀಯ ‌: ಸಿರಾಜುದ್ದೀನ್ ಬಂಗಾರ್ ಸಿರವಾರ

ಸಿರವಾರ ಜು.24 : ಪಟ್ಟಣದ ಪ್ರವಾಸಿಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ ‘ಡಿ’ ದರ್ಜೆಯ ನೌಕರನಿಗೆ ಕೊರೋನಾ ಪಾಸಿಟಿವ್ ಇರುವ ಕಾರಣ ಪ್ರವಾಸಿ ಮಂದಿರವನ್ನು ಸೀಲ್ ಡೌನ್ ಮಾಡಲಾಗಿದೆ.

ಪ್ರವಾಸಿ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯು ಸಾರ್ವಜನಿಕ ಜೀವನದಲ್ಲಿ ಇದ್ದುದರಿಂದ ಸಹಜವಾಗಿ ಆತಂಕ ಉಂಟುಮಾಡಿದೆ.

ಈತನ ಪ್ರಥಮ ಸಂರ್ಕಿತರನ್ನು ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವ ಕಾರ್ಯ ತಾಲ್ಲೂಕಾಡಳಿತ ಮಾಡುತ್ತಿದೆ.

ಈ ಹಿನ್ನಲೆಯಲ್ಲಿ ದಿನಾಂಕ ಜುಲೈ 12 ರಿಂದ ಇಲ್ಲಿವರೆಗೆ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿರುವ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಾಲ್ಲೂಕಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ತಹಶಿಲ್ದಾರ ಕೆ.ಶೃತಿ ಅವರು ತಿಳಿಸಿದ್ದಾರೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close