ಸಿರವಾರ

ಸಿರವಾರ : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಾಳೆ ಅಂಜುಮನ್ ಕಮೀಟಿವತಿಯಿಂದ ಗಿಡ ನೆಡುವ ಕಾರ್ಯಕ್ರಮ

ವರದಿ : ಸಿರಾಜುದ್ದೀನ್ ಬಂಗಾರ್ ಸಿರವಾರ

ಸಿರವಾರ ಅ.14 : 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಾಳೆ ಬೆಳಗ್ಗೆ ಸಿರವಾರ ಪಟ್ಟಣದ ಈದ್ಗಾ ಮೈದಾನದಲ್ಲಿ ಗಿಡನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿರವಾರ ತಾಲೂಕಿನ ಅಂಜುಮನ್ ಕಮೀಟಿಯ ಅಧ್ಯಕ್ಷರಾದ ಮಹಮ್ಮದ್ ವಲೀ ಅವರು ತಿಳಿಸಿದರು.

ನಂತರ ಮಾತನಾಡಿದ ಅವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರೂ ಸ್ವಾತಂತ್ರ್ಯ ಹೋರಾಟಗಾರರು ವೀರ ಯೋಧರು ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೆ ಬಲಿದಾನ ಮಾಡಿದ್ದಾರೆ. ಈ ವೀರ ಯೋಧರ ನೆನಪಿನಲ್ಲಿ ಸುಮಾರು 200 ಗಿಡಗಳನ್ನು ನೆಡಲಾಗುವುದು. ಜೊತೆಗೆ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ 90% ಫಲಿತಾಂಶವನ್ನು ಗಿಟ್ಟಿಸಿಕೊಂಡ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ಶಾಲೆಯಲ್ಲಿಯೆ ಓದಲು ಪ್ರೋತ್ಸಾಹಿಸಿದ ಪೋಷಕರಿಗೆ ಹಾಗೂ ಅವರಿಗೆ ಉತ್ತಮ ಶಿಕ್ಷಣ ಸಿಗುವಲ್ಲಿ ಸಹಕರಿಸಿದ ಶಿಕ್ಷಕರಿಗೂ ಸನ್ಮಾನಿಸಲಾಗುವುದು ಎಂದು ಹೇಳಿದರು.

ಸರ್ಕಾರಿ ಶಾಲೆಯಲ್ಲಿ ಸರಿಯಾದ ಶಿಕ್ಷಣ ಸಿಗುವುದಿಲ್ಲ ಎಂಬ ತಪ್ಪು ಕಲ್ಪನೆಯಲ್ಲಿ ಜನ ಸಾಮನ್ಯರು ಪೋಷಕರು ಇದ್ದಾರೆ ಸರ್ಕಾರಿ ಶಾಲೆಯಲ್ಲಿ ಸಿಗುವ ಸೌಲಭ್ಯಗಳಾಗಲಿ ಹಾಗೂ ಉತ್ತಮ ಶಿಕ್ಷಣ ಖಾಸಗಿ ಶಾಲೆಯಲ್ಲಿ ಸಿಗುವುದಿಲ್ಲ ಕಾರಣ ಅದಕ್ಕೆ ಉದಾಹರಣೆ ಸರ್ಕಾರಿ ಶಾಲೆಯಲ್ಲಿ ಉತ್ತಮ ಪಲಿತಾಂಶ ಪಡೆದ ವಿದ್ಯಾರ್ಥಿಗಳು ಎಂದು ಹೇಳಿದರು.

ನಂತರ ಮಾತನಾಡಿದ ಅವರಿ ಈ ಭಾರಿ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದು ಹೇಳಿದರು ಮತ್ತು ಸರ್ಕಾರಿ ಉರ್ದು ಶಾಲೆಯಲ್ಲಿ ಉತ್ತಮ ಫಲಿತಾಂಶಪಡೆದ ವಿದ್ಯಾರ್ಥಿಗಳಿಗೆ ದ್ವೀತಿಯ ಪಿಯುಸಿ ಮುಗಿಯುವವರೆಗೂ ಅವರಿಗೆ ಅವಶ್ಯವಿರುವ ಪಠ್ಯ ಪುಸ್ತಕಗಳನ್ನು ಅಂಜುಮನ್ ಕಮೀಟಿವತಿಯಿಂದಲೆ ನೀಡಲಾಗುವುದು ಎಂದು ಹೇಳಿದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close