ಕರ್ನಾಟಕ ಸುದ್ದಿ

10ನೆ ತರಗತಿ ವೇಳಾಪಟ್ಟಿ ಪ್ರಕಟ; ಪರೀಕ್ಷೆ ಭಯದಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ವರದಿ : ಸಿರಾಜುದ್ದಿನ್ ಬಂಗಾರ್

ಕೊಡಗು (ಮೇ 19); 10ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟಣೆ ಮಾಡುತ್ತಿದ್ದಂತೆ ಪರೀಕ್ಷೆ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಾಜೂರು ಗ್ರಾಮದಲ್ಲಿ ನಡೆದಿದೆ.

ಸೋಮವಾರಪೇಟೆ ತಾಲೂಕು ಕಾಜೂರಿನ ಭಾರತಿ ವಿದ್ಯಾಸಂಸ್ಥೆ ವಿದ್ಯಾರ್ಥಿ ರಿಷಿ (15) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೊರೋನಾ ಕಾರಣದಿಂದಾಗಿ ಏಪ್ರಿಲ್‌ ನಲ್ಲಿಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಅಲ್ಲದೆ, ದೇಶದಾದ್ಯಂತ ಎರಡು ತಿಂಗಳ ಸುದೀರ್ಘ ಲಾಕ್‌ಡೌನ್‌ ಘೋಷಿಸಿದ್ದ ಪರಿಣಾಮ ಕಳೆದ ಎರಡು ತಿಂಗಳಿಂದ ಪರೀಕ್ಷೆ ನಡೆಸುವುದು ಸಾಧ್ಯವಾಗಿರlಲಿಲ್ಲಿ.

ಆದರೆ, ಇದೀಗ ಹಂತಹಂತಾಗಿ ಲಾಕ್‌ಡೌನ್ ತೆರವುಗೊಳಿಸಿರುವ ಪರಿಣಾಮ ಪ್ರೌಢ ಶಿಕ್ಷಣ ಇಲಾಖೆ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸ್ವತಃ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ ವಿಚಾರ ತಿಳಿದ ತಕ್ಷಣ ರಿಷಿ ಪರೀಕ್ಷೆ ಭಯದಿಂದ ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣಿಗೆ ಶರಣಾಗಿದ್ದಾನೆ.

ಶನಿವಾರ ಸಂತೆ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags
Continue

Related Articles

Leave a Reply

Your email address will not be published. Required fields are marked *

Back to top button
Close
Close