
ವರದಿ : ಸಿರಾಜುದ್ದಿನ್ ಬಂಗಾರ್
ರಾಯಚೂರು ಮೇ.22 : ರಾಯಚೂರಿಗೆ ಆಗಮಿಸಿರುವ ಮುಂಬೈ ವಲಸಿಗರಿಂದ ಕೊರೋನಾ ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂದು ಸಂಜೆ ಜಿಲ್ಲಾಡಳಿತ ಬಿಡುಗಡೆ ಮಾಡಿದ ಸೋಂಕಿತರ ಪಟ್ಟಿಯಲ್ಲಿ ಮತ್ತೆ ದೇವದುರ್ಗದ 10 ಜನಕ್ಕೆ ಪಾಸಿಟಿವ್ ಪ್ರಕರಣಗಳು ದೃಢವಾಗಿವೆ.
ಇಂದು ಕೂಡಾ ಜಿಲ್ಲೆಯಲ್ಲಿ ಬೆಳಗಿನ ಸೋಂಕಿತರ ಪಟ್ಟಿಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಆದರೆ 5 ಗಂಟೆ ಹೆಲ್ತ್ ಬುಲೆಟಿನ್ ನಲ್ಲಿ 10 ಜನರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಈ ಐದು ಜನರೂ ಕೂಡ ಮಹಾರಾಷ್ಟ್ರದಿಂದ ಬಂದಿರುವವರಾಗಿದ್ದು. ಇವರೆಲ್ಲ ದೇವದುರ್ಗ ತಾಲ್ಲೂಕಿನ ವರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕು ಹರಡಿದವರ ಸಂಖ್ಯೆ 26 ಕ್ಕೆ ಏರಿಕೆಯಾದಂತಾಗಿದೆ. ಸೋಂಕಿತರನ್ನು ಈಗಾಗಲೇ ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎ ವೆಂಕಟೇಶ ಕುಮಾರ್ ತಿಳಿಸಿದ್ದಾರೆ.