
Posted : Sirajuddin Bangar
Source : NS18
ಕರ್ನಾಟಕದ ವೆಂಕಟೇಶ ಪ್ರಸನ್ನ, ಲಕ್ಷ್ಮೀನಾರಾಯಣ ಸೇರಿದಂತೆ 25 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು (ಮೇ 23): ಕರ್ನಾಟಕದಲ್ಲಿ ಕೊರೋನಾ ವೈರಸ್ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮಾರಕ ಸೋಂಕಿನ ನಿಯಂತ್ರಣದತ್ತಲೇ ಹೆಚ್ಚು ಗಮನಹರಿಸಿದ್ದ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಯಾವುದೇ ಮಹತ್ತರವಾದ ಬದಲಾವಣೆಗಳನ್ನು ಮಾಡಿರಲಿಲ್ಲ. ಆದರೆ, ಇಂದು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಸಲಾಗಿದ್ದು, ಕರ್ನಾಟಕದ 25 ಡಿವೈಎಸ್ಪಿ ಹಾಗೂ 24 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ.
ಕರ್ನಾಟಕದ ವೆಂಕಟೇಶ ಪ್ರಸನ್ನ, ಲಕ್ಷ್ಮೀನಾರಾಯಣ ಸೇರಿದಂತೆ 25 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗೇ, ರಾಜ್ಯದ ವಿವಿಧೆಡೆಗೆ 24 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಶುಕ್ರವಾರ ಸಂಜೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ವಿವಿಐಪಿ ಭದ್ರತಾ ವಿಭಾಗದಿಂದ ವೆಂಕಟೇಶ್ ಪ್ರಸನ್ನ ಅವರನ್ನು ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಮಾಡಲಾಗಿದೆ. ಇವರು ರವಿ ಪೂಜಾರಿ ಸಂಪರ್ಕ ಆರೋಪದಲ್ಲಿ ಸಿಸಿಬಿಯಿಂದ ವಿವಿಐಪಿ ಭದ್ರತಾ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರು. ಸದ್ಯ ಇವರನ್ನು ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.