
Source : NS18
ಬಂಧಿತನಿಂದ ಸ್ಕಾರ್ಪಿಯೋ ವಾಹನ, ಅಕ್ರಮ ಮದ್ಯ, ಪಿಸ್ತೂಲ್ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಲಬುರ್ಗಿ(ಮೇ.24): ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯ ಬಂಧಿಸಿರುವ ಪೊಲೀಸರು, ಒಂದು ಪಿಸ್ತೂಲ್, ಜೀವಂತ ಗುಂಡು ವಶಪಡಿಸಿಕೊಂಡ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ನಗರದ ಸ್ಟೇಷನ್ ಬಜಾರ್ ಏರಿಯಾದಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಸ್ಕಾರ್ಪಿಯೋ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿ ಓರ್ವನನ್ನು ಬಂಧಿಸಿದ್ದಾರೆ. ದಾಳಿ ವೇಳೆ 17 ಲೀಟರ್ ಲಿಕ್ಕರ್, 70 ಲೀಟರ್ ಬಿಯರ್ ಪತ್ತೆಯಾಗಿದೆ. ಅಲ್ಲದೆ ಆರೋಪಿ ಬಳಿ ಒಂದು ಪಿಸ್ತೂಲ್ ಹಾಗೂ 10 ಜೀವಂತ ಗುಂಡುಗಳು ಪತ್ತೆಯಾಗಿವೆ. ಬಂಧಿತನನ್ನು ಆಳಂದ ತಾಲ್ಲೂಕಿನ ಹಿರೋಳ್ಳಿ ಗ್ರಾಮದ ದಯಾನಂದ ಹಾಸು ಎಂದು ಗುರುತಿಸಲಾಗಿದೆ.
ಬಂಧಿತನಿಂದ ಸ್ಕಾರ್ಪಿಯೋ ವಾಹನ, ಅಕ್ರಮ ಮದ್ಯ, ಪಿಸ್ತೂಲ್ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.