
Source : DH
ಉಡುಪಿಯಲ್ಲಿ ಮೂವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗಳನ್ನು ಬಂದ್ ಮಾಡಲಾಗಿದೆ.
ಕಾರ್ಕಳ ಗ್ರಾಮಾಂತರ, ಅಜೆಕಾರು, ಬ್ರಹ್ಮಾವರ ಪೊಲೀಸ್ ಠಾಣೆಗಳ ಮೂವರು ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ಗೊತ್ತಾಗಿದೆ. ಪೊಲೀಸ್ ಇಲಾಖೆಯಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರು ಪೊಲೀಸರಿಗೆ ಸೋಂಕು ತಗುಲಿರುವ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಿದ್ದಾರೆ.
ಕಾರ್ಕಳ ಗ್ರಾಮಾಂತರ, ಅಜೆಕಾರು, ಬ್ರಹ್ಮಾವರ ಪೊಲೀಸ್ ಠಾಣೆಯ ಸಿಬ್ಬಂದಿ ಚೆಕ್ ಪೋಸ್ಟ್ ಮತ್ತು ಕ್ವಾರಂಟೈನ್ ಸೆಂಟರ್ ನಲ್ಲಿ ಕೆಲಸ ಮಾಡುವ ವೇಳೆ ಸೋಂಕು ತಗುಲಿರುವ ಸಾಧ್ಯತೆ ಇದೆ. ಠಾಣೆಗಳ ಎಲ್ಲ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಪೊಲೀಸ್ ಠಾಣೆಗಳಲ್ಲಿ ಸ್ಯಾನಿಟೈಸ್ ಮಾಡಲು ನಿರ್ಧರಿಸಲಾಗಿದೆ. 2 ದಿನಗಳ ಬಳಿಕ ಮತ್ತೆ ಠಾಣೆಗಳು ಕಾರ್ಯಾರಂಭ ಮಾಡಲಿವೆ. ಮೂರು ಪೊಲೀಸ್ ಕಾನ್ ಸ್ಟೇಬಲ್ ಗಳ ಸಂಪರ್ಕಿತರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎನ್ನಲಾಗಿದೆ.