— ಸಿರಾಜುದ್ದೀನ್ ಬಂಗಾರ್, ಸಿರವಾರ
ಮಂಗಳವಾರ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬಿಸಿಲ ಬೇಗೆಯಿಂದ ಕಾದಿದ್ದ ಭೂಮಿಗೆ ಮಳೆರಾಯ ತಂಪೆರೆದ ಪರಿಣಾಮ ಬೆಂಗಳೂರಿನಲ್ಲಂತೂ ಭಾರೀ ಪ್ರಮಾಣದ ಅನಾಹುತವನ್ನೇ ಸೃಷ್ಟಿಸಿತ್ತು.
ರಾಜ್ಯಾದ್ಯಂತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶ, ಉತ್ತರದ ಒಳನಾಡು ಪ್ರದೇಶಗಳಲ್ಲೂ ಗುಡುಗು ಸಮೇತ ಮಳೆಯಾಗಲಿದೆ. ಪ್ರತೀ ಗಂಟೆಗೊಮ್ಮೆ40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಿದೆ.
ಇನ್ನು, ನಿನ್ನೆ ಸಂಜೆಯಂತೆಯೇ ಬೆಂಗಳೂರಿನಲ್ಲಿ ಭಾರೀ ಮಳೆಯೊಂದಿಗೆ ಬಿರುಗಾಳಿಯೂ ಬೀಸುವ ಕಾರಣ ಮರಗಳು ಧರೆಗುರುವ ಸಾಧ್ಯತೆ ಇದೆ. ತಗ್ಗು ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ನಿಲ್ಲಲಿದೆ ಎಂದೇಳಲಾಗುತ್ತಿದೆ.
,ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ ಒಂದು ವಾರದವರೆಗೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಕಾರಣ ಈಗ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೀಗೆ ಗುಡುಗು ಸಮೇತ ಮಳೆಯಾಗಲಿದೆ ಎನ್ನಲಾಗುತ್ತಿದೆ.
ಮಂಗಳವಾರ ರಾಜ್ಯದ ಬಹುತೇಕ ಕಡೆ ಗುಡುಗು ಸಹಿತ ಸುರಿದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬಿಸಿಲ ಬೇಗೆಯಿಂದ ಕಾದಿದ್ದ ಭೂಮಿಗೆ ಮಳೆರಾಯ ತಂಪೆರೆದ ಪರಿಣಾಮ ಬೆಂಗಳೂರಿನಲ್ಲಂತೂ ಭಾರೀ ಪ್ರಮಾಣದ ಅನಾಹುತವನ್ನೇ ಸೃಷ್ಟಿಸಿತ್ತು.