ಅಂತರಾಷ್ಟ್ರೀಯ

ರಾಜ್ಯಸಭಾ ಸಚಿವಾಲಯದ ಸಿಬ್ಬಂದಿಗೆ ಕೊರೋನಾ ಪಾಸಿಟಿವ್; ಸಂಸತ್ ಭವನ ಸೀಲ್‌ಡೌನ್

— ಸಿರಾಜುದ್ದೀನ್ ಬಂಗಾರ್ ಸಂಪಾದಕರು, ಕರ್ನಾಟಕ-ಜ್ವಾಲೆ

ರಾಜ್ಯಸಭಾ ಸಚಿವಾಲಯದ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಂಸತ್ ಭವನವನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ತಿಂಗಳಿನಿಂದ ಇಡೀ ದೇಶವೇ ಲಾಕ್‌ಡೌನ್ ಆಗಿದ್ದರೂ ಸಹ ಸಂಸತ್‌ ಭವನ ಮಾತ್ರ ಕಾರ್ಯ ನಿರ್ವಹಿಸುತ್ತಿತ್ತು. ಹೀಗಾಗಿ ಕೇಂದ್ರ ಸರ್ಕಾರ ಸಂಸತ್‌ ಭವನದಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ನೌಕರರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿತ್ತು. ಇಂದು ಪರೀಕ್ಷೆ ವರದಿ ಸಿಕ್ಕಿದ್ದು, ರಾಜ್ಯಸಭಾ ಸಚಿವಾಲಯದ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

, ಸಿಬ್ಬಂದಿಯ ಮಡದಿ ಮಕ್ಕಳಲ್ಲೂ ಕೊರೋನಾ ರೋಗ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಇಡೀ ಕುಟುಂಬವನ್ನು ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಸಂಸತ್ ಭವನದಲ್ಲಿ ಕೊರೋನಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ‌ ಕೆಲಸ ಮಾಡುತ್ತಿದ್ದ ಸಂಸತ್ ಭವನದ ಅನೆಕ್ಸ್ ಕಟ್ಟಡದ 5ನೇ ಫ್ಲೋರ್ ಅನ್ನು ಸದ್ಯಕ್ಕೆ ಸೀಲ್‌ಡೌನ್ ಮಾಡಲಾಗಿದೆ. ಸಿಬ್ಬಂದಿ ಸಂಪರ್ಕದಲ್ಲಿದ್ದವರಿಗೂ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close