
Posted By : Sirajuddin Bangar
Source: NS18
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಎಲ್ಲಾ ಶಾಸಕರು, ಎಂಎಲ್ಸಿಗಳು ಸಭೆಗೆ ಬಂದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ಬಳಿಕ ಅಧ್ಯಕ್ಷ ಡಿ.ಕೆ ಶಿವಕುಮಾರ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ‘ಬಿ’ ಫಾರಂ ನೀಡಿದರು. ಆನಂತರ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಖರ್ಗೆಯವರನ್ನು ನಾವು ಅಭ್ಯರ್ಥಿಯಾಗಿಸಿದ್ದೇವೆ. ಕಾಂಗ್ರೆಸ್ನಿಂದ ಎರಡನೇ ಅಭ್ಯರ್ಥಿ ಹಾಕಲ್ಲ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಈ ಬಗ್ಗೆ ರಾಷ್ಟ್ರೀಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದರಲ್ಲಿ ನಾವು ತಲೆ ಹಾಕಲ್ಲ ಎಂದರು.
ಇದೇ ತಿಂಗಳ 19ರಂದು ರಾಜ್ಯದಿಂದ ಖಾಲಿಯಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡಲಿದ್ದು, ಇಂದು ನಾಮಪತ್ರ ಸಲ್ಲಿಸಲಿದ್ದಾರೆ.