ಕರ್ನಾಟಕ ಸುದ್ದಿ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Posted By: Sirajuddin Bangar

Source: NS18

ಬೆಂಗಳೂರು(ಜೂ.08): ಭಾರೀ ಕುತೂಹಲ ಮೂಡಿಸಿರುವ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದರು. ಸದಾಶಿವನಗರದ ಅವರ ನಿವಾಸಕ್ಕೆ ಹಲವಾರು ಗಣ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಕಾರ್ಯಕರ್ತರು ಬಂದು ಶುಭ ಕೋರಿದರು.

ನಾಮಪತ್ತ ಸಲ್ಲಿಕೆಗೂ ಮುನ್ನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ‌ ಬಂದು ಬಿ ಫಾರಂ ಪಡೆದು. ಬಳಿಕ ವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ, ಅಭ್ಯರ್ಥಿ ಜೊತೆಗೆ ಕೇವಲ ನಾಲ್ಕು ಜನರು ಮಾತ್ರ ಇರಬೇಕು ಎಂದು ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ತಿಳಿಸಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಜೊತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವ ಆರ್​ ವಿ ದೇಶ ಪಾಂಡೆ, ಶಾಸಕ ಕೆ ಆರ್​ ರಮೇಶ್ ಕುಮಾರ್​, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮತ್ತಿತರ ಕೆಲ ನಾಯಕರು ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close