
Posted by : Sirajuddin Bangar
Source: NS18
ಉಡುಪಿ : ಮಹಾರಾಷ್ಟ್ರದಿಂದ ಬಂದವರನ್ನು ಇನ್ನು ಮುಂದೆ 14 ದಿನಗಳ ಹೋಂ ಕ್ವಾರಂಟೈನ್ ಮಾಡಿ ವ್ಯಕ್ತಿ ವಾಸವಾಗಿರುವ ಮನೆಯನ್ನು ಸೀಲ್ ಡೌನ್ ಮಾಡಲಾಗುವುದು ಒಂದು ವೇಳೆ ಕ್ವಾರಂಟೈನ್ ನಲ್ಲಿರುವ ವ್ಯಕ್ತಿ ಮನೆಯಿಂದ ಹೊರಗಡೆ ಬಂದರೆ ಅಂತವರ ಮೇಲೆ ಕ್ರಮ ಜರುಗಿಸುವ ನಿರ್ಧಾರವನ್ನು ಸರಕಾರ ಮಾಡಿದೆ ಎಂದು ಅರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಅರೋಗ್ಯ ಸಚಿವರು ಮಂಗಳವಾರ ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡುತ್ತಾ ಇನ್ನು ಮುಂದೆ ಮಹಾರಾಷ್ಟ್ರದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡುವ ಬದಲು ಹೋಮ್ ಕ್ವಾರಂಟೈನ್ ಮಾಡಲು ರಾಜ್ಯ ಸರಕಾರ ಹೊಸ ಕ್ರಮಗಳನ್ನು ಕೈಗೊಂಡಿದೆ ಹಾಗಾಗಿ ಮಹಾರಾಷ್ಟ್ರದಿಂದ ಬಂದವರನ್ನು ಸೀಲ್ ಹಾಕಿಸಿ ಹೋಮ್ ಕ್ವಾರಂಟೈನ್ ಮಾಡಿ ಮನೆಯನ್ನು ಸೀಲ್ ಡೌನ್ ಮಾಡಲಾಗುತ್ತದೆ ಒಂದು ವೇಳೆ ಈ ಸಂದರ್ಭದಲ್ಲಿ ಮನೆಯಿಂದ ಹೊರಬಂದರೆ ಅಂತ ವ್ಯಕ್ತಿಯ ಮೇಲೆ ಕೇಸ್ ಹಾಕುವ ನಿರ್ಧಾರವನ್ನು ಸರಕಾರ ಮಾಡಿದೆ ಎಂದು ತಿಳಿಸಿದರು.