ಕರ್ನಾಟಕ ಸುದ್ದಿ

ಆಷಾಡಲ್ಲಾದರೂ ಸರಿ ಪದಗ್ರಹಣ ಕಾರ್ಯಕ್ರಮ ಮಾಡಿಯೇ ಮಾಡುತ್ತೇನೆ: ಡಿಕೆ ಶಿವಕುಮಾರ್

Posted by: Sirajuddin Bangar

Source:NS18

ಬೆಂಗಳೂರು: ಸದ್ಯ ನಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಸರಕಾರ ಅನುಮತಿ ನಿರಾಕರಿಸಿದರೂ ನಮ್ಮ ಕಾರ್ಯಕ್ರಮ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಆಷಾಢದಲ್ಲಿಯಾದರೂ ಪ್ರತಿಜ್ಞೆ ತೆಗೆದುಕೊಳ್ಳುತ್ತೇನೆ. ನನಗೂ ಸಾಕಷ್ಟು ನಂಬಿಕೆ ಇದೆ. ನಾನು ಕಾನೂನಿಗೆ ಗೌರವ ಕೊಟ್ಟೇ ಅಧಿಕಾರ ಸ್ವೀಕಾರ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಜೂನ್ 14ರಂದು ಪದಗ್ರಹಣ ಕಾರ್ಯಕ್ರಮ ನಡೆಸಲು ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ಕೇಳಿ ಮುಖ್ಯಮಂತ್ರಿಗಳಿಗೆ ಮತ್ತೆ ಪತ್ರ ಬರೆದು ಅವಕಾಶ ಕೇಳುತ್ತೇನೆ.  ಅವರು ಅವಕಾಶ ಕೊಟ್ಟಾಗ ಅಧಿಕಾರ ಸ್ವೀಕಾರ ಮಾಡುತ್ತೇನೆ ಎಂದರು.

ಅಧ್ಯಕ್ಷ ಸ್ಥಾನವನ್ನು ಸಂಪ್ರದಾಯಿಕವಾಗಿ ಸ್ವೀಕರಿಸುವ ಕಾರ್ಯಕ್ರಮಕ್ಕೆ ಪಕ್ಷದ ಹಿರಿಯರ ಆಶೀರ್ವಾದ ಪಡೆದು, ಹಿಂದಿನ ಅಧ್ಯಕ್ಷರುಗಳಿಗೆ ಗೌರವ ಸಮರ್ಪಿಸುವ ಕಾರ್ಯಕ್ರಮ ಹಾಕಿಕೊಂಡಿದ್ದೇವು. ಮೂರು ಬಾರಿ ಕಾರ್ಯಕ್ರಮ ಹಾಕಿಕೊಂಡಿದ್ದೇವು. ಸ್ವತಃ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಮುಖ್ಯ ಕಾರ್ಯದರ್ಶಿಗಳಿಗೂ ಮನವಿ ಮಾಡಿದ್ದೆ. ದೇಶದ ಯಾವ ರಾಜ್ಯದಲ್ಲಿಯೂ ಭಾನುವಾರ ಕರ್ಪ್ಯೂ ಇಲ್ಲದಿದ್ದರೂ ರಾಜ್ಯದಲ್ಲಿ ಭಾನುವಾರ ಕರ್ಪ್ಯೂ ಜಾರಿ ಮಾಡಿದ್ದರು. ಸುಮಾರು 10,500 ಕಡೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದರು. ಈ ಕಾರ್ಯಕ್ರಮ ಮಾಡುವ ಬಗ್ಗೆ ಒಂದೂವರೆ ತಿಂಗಳಿನಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ರಾಜ್ಯ ಸರಕಾರ ಕೇಂದ್ರದ ಕೋವಿಡ್ ನಿರ್ದೇಶನದ ನೆಪ ಹೇಳಿ ಅಧಿಕಾರಿಗಳ ಮೂಲಕ ಆದೇಶ ಕಳುಹಿಸಿದ್ದಾರೆ ಎಂದರು.

ನಾವು ಯಾವ ರೀತಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂಬ ಮಾಹಿತಿಯನ್ನು ಸರ್ಕಾರದ ಗಮನಕ್ಕೂ ತಂದಿದ್ದೇವು. ಕೇವಲ 150 ಜನರಿಗೆ ಮಾತ್ರ ಅವಕಾಶ ಕೇಳಿದ್ದೆವು. ಯಡಿಯೂರಪ್ಪ ನುಡಿದಂತೆ ನಡೆಯುತ್ತಾರೆ ಎಂದುಕೊಂಡಿದ್ದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಎಷ್ಟು ಜನ ಸಚಿವರು ಕಾರ್ಯಕ್ರಮ ಮಾಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರನ್ನು ಸೇರಿಸಿದವರ ವಿರುದ್ಧ ಸರ್ಕಾರ ಯಾವ ಕ್ರಮ ಕೈಗೊಂಡಿದೆ. ಪದಗ್ರಹಣ ಕಾರ್ಯಕ್ರಮ ಅನುಮತಿ ನಿರಾಕರಿಸಿರುವುದು ಪ್ರಜಾಪ್ರಭುತ್ವದಲ್ಲಿ ಕರಾಳ ದಿನ ಎಂದರು

ಪಶ್ಚಿಮ ಬಂಗಾಲ, ಓಡಿಸ್ಸಾ, ಬಿಹಾರ್ ದಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ಕೇಂದ್ರ ಗೃಹ ಸಚಿವರು ಪಾಲ್ಗೊಂಡಿದ್ದರು. 70 ಸಾವಿರ ಎಲ್.ಇ ಡಿ ಬಳಕೆ ಮಾಡಲಾಗಿತ್ತು ಎಂದು ವರದಿಯಾಗಿದೆ. ಅವರಿಗೊಂದು ಕಾನೂನು ನಮಗೊಂದು ಕಾನೂನಾ ಎಂದು ಡಿಕೆಶಿ ಪ್ರಶ್ನಿಸಿದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close