
ವರದಿ: ಸಿರಾಜುದ್ದೀನ್ ಬಂಗಾರ್
ಲಿಂಗಸುಗೂರು: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಇತ್ತೀಚೆಗೆ ಮುಂಗಾರು ಹಂಗಾಮಿನ ಬಿತ್ತನೆಗಾಗಿ ಶಾಸಕ ಡಿ.ಎಸ್. ಹೂಲಗೇರಿ ಬೀಜ ವಿತರಿಸಿದರು.
ನಂತರ ಮಾತನಾಡಿದ ಶಾಸಕ ಹೂಲಗೇರಿ ರೈತರು ಗುಣಮಟ್ಟದ ಬಿತ್ತನೆ ಬೀಜಗಳನ್ನು ಆಯ್ಕೆಮಾಡಿಕೊಳ್ಳಬೇಕು. ಸರ್ಕಾರದಿಂದ ವಿತರಿಸುವ ಪ್ರಮಾಣೀಕೃತ ಮಾನ್ಯತೆ ಪಡೆದ ಉತ್ತಮ ಗುಣಮಟ್ಟದ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿದರೆ ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದು ರೈತರಿಗೆಸಲಹೆ ನೀಡಿದರು.
ತೊಗರಿ, ಸಜ್ಜೆ, ಮೆಕ್ಕೆಜೋಳ, ಸೂರ್ಯಕಾಂತಿ ಬೀಜಗಳನ್ನು ಸಬ್ಸಡಿ ದರದಲ್ಲಿ ನೀಡಲಾಗುತ್ತಿದೆ. ಈಗಾಗಲೇ ಅಲ್ಲಿಲ್ಲಿ ಸ್ವಲ್ಪ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಬೀಜ ವಿತರಿಸಲಾಗುತ್ತಿದೆ. ಬಿತ್ತನೆ ಬೀಜಗಳಿಗಾಗಿ ರೈತರಿಗೆ ತೊಂದರೆ ನೀಡದೇ ಸಮರ್ಪಕವಾಗಿ ವಿತರಿಸಲು ಅಧಿಕಾರಿಗಳು ಪ್ರಮಾಣಿಕ ಪ್ರಯತ್ನ ಮಾಡಬೇಕು. ರೈತರು ಸರ್ಕಾರದ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ತಾಪಂ ಅಧ್ಯಕ್ಷೆ ಶ್ವೇತಾ ಪಾಟೀಲ, ಸಹಾಯಕ ಕೃಷಿ ನಿರ್ದೇಶಕ ಮಹಾಂತೇಶ ಹವಾಲ್ದಾರ, ಕೃಷಿ ಅಧಿಕಾರಿಗಳಾದ ಸಿದ್ದಪ್ಪ ಬಾಚಿಹಾಳ, ಶೌಕತ್ ಅಲಿ, ಕಾಂಬಳೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಮುಖಂಡರಾದ ಗುಂಡಪ್ಪ ನಾಯಕ, ಪಾಮಯ್ಯ ಮುರಾರಿ, ಬಸವರಾಜಗೌಡ ಗಣೇಕಲ್ ಇದ್ದರು.