ದೇಶದ-ವಿದೇಶ

ಗಾಲ್ವನ್ ಕಣಿವೆಯಲ್ಲಿ ಭಾರತ-ಚೀನಾ ನಡುವೆ ಘರ್ಷಣೆ; ದೇಶದ 20 ಸೈನಿಕರು ಹುತಾತ್ಮ

ಸಂಪಾದಕೀಯ : ಸಿರಾಜುದ್ದೀನ್ ಬಂಗಾರ್ ಸಿರವಾರ

ಭಾರತ ಮತ್ತು ಚೀನಾ ನಡುವೆ ಘರ್ಷಣೆ ಏರ್ಪಟ್ಟಿದ್ದು, ಲಡಾಕ್​ನ ಗಾಲ್ವನ್ ​ ಕಣಿವೆ ಭಾಗದಲ್ಲಿ ಎರಡು ದೇಶಗಳ ಸೇನೆಯ ನಡುವೆ ಗುಂಡಿನ ಕಾಳಕ ನಡೆದಿದೆ. ಗುಂಡಿನ ಚಕಮಕಿ ವೇಳೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ​ಐ ಸರ್ಕಾರಿ ಮೂಲಗಳು ಖಚಿತಪಡಿಸಿವೆ. 

ಇದಕ್ಕೂ ಮೊದಲು ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಆದರೆ ಇದೀಗ ಚೀನಾ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಭಾರತೀಯ ಸೈನಿಕರ ಪ್ರತಿದಾಳಿಗೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ಹೇಳಿದೆ.

ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಸೇನೆಯ ಮೂರು ಪಡೆಗಳ ಮುಖ್ಯಸ್ಥರ ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ ನಡೆಸಿದ್ದಾರೆ. ಬಳಿಕ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಣೆ ನೀಡಿದ್ದಾರೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close