ಕರ್ನಾಟಕ ಸುದ್ದಿ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 22 ನೇ ಘಟಿಕೋತ್ಸವ ಸಮಾರಂಭ

ವರದಿ : ವಿಜಯ. ಎ.ಸರೋದೆ ಪತ್ರಕರ್ತರು, ಸಿರವಾರ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 22 ನೇ ಘಟಿಕೋತ್ಸವ ಸಮಾರಂಭ

ಆನ್‌ಲೈನ್ ಮೂಲಕ ಪದವಿ ಪ್ರಧಾನ ಮಾಡಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

ಬೆಂಗಳೂರು – ಜೂನ್ 25, 2020: ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವ ಸಮಾರಂಭ ಗುರುವಾರ ಬೆಂಗಳೂರಿನಲ್ಲಿ ಜರುಗಿತು. ಸನ್ಮಾನ್ಯ ರಾಜ್ಯಪಾಲರಾದ ಶ್ರೀ ವಜುಭಾಯಿ ವಾಲಾ ಅವರ ಅನುಪಸ್ಥಿತಿಯಲ್ಲಿ ವಿಶ್ವವಿದ್ಯಾಲಯದ ಪರಕುಲಪತಿಗಳು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರೂ ಆದ ಡಾ.ಕೆ.ಸುಧಾಕರ್ ಅವರು ಸಮಾರಂಭವನ್ನು ಉದ್ಘಾಟಿಸಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ಕುಲಪತಿಗಳಾದ ಪದ್ಮಭೂಷಣ ಡಾ.ಪಿ.ಬಲರಾಂ, ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ.ಸಚ್ಚಿದಾನಂದ್ ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಕುಟುಂಬದವರಿಗೆ ಕೊರೋನ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸ್ವಯಂ ಗೃಹಬಂಧನದಲ್ಲಿರುವ ಸಚಿವ ಸುಧಾಕರ್ ಅವರು ಆನ್‌ಲೈನ್ ವೀಡಿಯೋ ಸಂವಾದದ ಮೂಲಕ ಘಟಿಕೋತ್ಸವವನ್ನು ಉದ್ಘಾಟಿಸಿದರು. ವಿಶ್ವವಿದ್ಯಾಲಯದ ಪರ ಕುಲಪತಿಗಳಾಗಿ ಪದವಿ ಪ್ರಧಾನ ಮಾಡುತ್ತಿರುವುದು ಅತ್ಯಂತ ಗೌರವದ ಸಂಗತಿ ಎಂದು ಅವರು ಹೇಳಿದರು. ವೈದ್ಯಕೀಯ, ದಂತವೈದ್ಯಕೀಯ, ಸ್ನಾತಕೋತ್ತರ, ಆಯುರ್ವೇದ, ಹೋಮಿಯೋಪತಿ ಮುಂತಾದ ರಂಗಗಳಲ್ಲಿನ ಸುಮಾರು 36,434 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಸಾಮಾಜಿಕ ಅಂತರ ಕಾಯ್ದುಕೊಂಡು ಸಮಾರಂಭವನ್ನು ಆಯೋಜಿಸಲಾಗಿತ್ತು. ದೇಶದಲ್ಲೇ ಅತ್ಯಂತ ಪ್ರತಿಷ್ಠಿತ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಇದಾಗಿದ್ದು ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Continue

Related Articles

Leave a Reply

Your email address will not be published. Required fields are marked *

Back to top button
Close
Close