ರಾಯಚೂರು ಜಿಲ್ಲೆ ಸುದ್ದಿ

ರಾಯಚೂರು : ಜುಲೈ 15 ರಿಂದ ರಾಯಚೂರು, ಸಿಂಧನೂರು ಮತ್ತೆ ಲಾಕಡೌನ;ಆರ್. ವೆಂಕಟೇಶ

ಸಂಪಾದಕೀಯ : ಸಿರಾಜುದ್ದೀನ್ ಬಂಗಾರ್ ಸಿರವಾರ

ರಾಯಚೂರು ಜು.13 : ರಾಯಚೂರ, ಸಿಂಧನೂರು ನಗರಗಳಲ್ಲಿ ಜು.15 ರಿಂದ ಮತ್ತೆ ಲಾಕ್ ಡೌನ್:
ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ.
ರಾಯಚೂರು ಹಾಗೂ ಸಿಂಧನೂರು ನಗರ ವ್ಯಾಪ್ತಿಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಣಕ್ಕೆ ತರಲು ಇದೇ ಜು. 15ರ ಬುಧವಾರದಿಂದ ಜು. 22ರ ಬುಧವಾರದ ವರೆಗೆ ರಾಯಚೂರು ಹಾಗೂ ಸಿಂಧನೂರು ನಗರಗಳ ವ್ಯಾಪ್ತಿಯಲ್ಲಿ ಮಾತ್ರ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ ಕುಮಾರ್ ಅವರು ತಿಳಿಸಿದರು.


ಅವರು ಜು.13ರ ಸೋಮವಾರ ಸಂಜೆ ರಾಯಚೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕೊರೋನಾ ಪಾಸಿಟಿವ್ ಪ್ರಕರಣಗಳು ರಾಯಚೂರು ನಗರ ಮತ್ತು ಸಿಂಧನೂರು ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಹೆಚ್ಚಾಗಿ ವರದಿಯಾಗುತ್ತಿವೆ, ಸುಮಾರು 250 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗಿರುವ ಪ್ರಕರಣಗಳಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿರುವವರಲ್ಲಿ ಈ ಸೋಂಕು ಕಂಡುಬಂದಿದೆ, ಈ ಹಿಂದೆ ಮಹಾರಾಷ್ಟ್ರ, ತೆಲಂಗಾಣ ರಾಜ್ಯದಿಂದ ಬಂದಿರುವವರಲ್ಲಿ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದವರಲ್ಲಿಯೂ ಕೊರೋನಾ ಸೋಂಕು ಕಂಡುಬರುತ್ತಿದೆ, ರಾಜ್ಯದಲ್ಲಿ ಪ್ರಾಥಮಿಕ ಸಂಪರ್ಕಿತರಲ್ಲಿ ಪಾಸಿಟಿವ್ ಪತ್ತೆ ಪ್ರಕರಣಗಳು ರಾಯಚೂರು ಜಿಲ್ಲೆಯಲ್ಲಿಯೇ ಅತಿ ಹೆಚ್ಚಾಗಿವೆ, ಇದೂವರೆಗೆ 8 ಜನರು ಮೃತಪಟ್ಟಿದ್ದಾರೆ ಎಂದವರು ಹೇಳಿದರು.
ಜಿಲ್ಲೆಯ ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ವ್ಯಾಪಾರಸ್ಥರು, ವಾಣಿಜೋದ್ಯಮ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ, ರಾಯಚೂರು ನಗರ, ಸಿಂಧನೂರು ಪಟ್ಟಣದಲ್ಲಿ ಮಾತ್ರ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ, ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ಕಿರಾಣಿ ಅಂಗಡಿ, ಔಷಧಿ, ಆಸ್ಪತ್ರೆ, ಪೆಟ್ರೋಲ್ ಪಂಪ್ ಸೇರಿದಂತೆ ಅವಶ್ಯ ವಸ್ತುಗಳ ಪೂರೈಕೆ ಮಳಿಗೆಗಳು ಮಾತ್ರ ಈ ಸಂದರ್ಭದಲ್ಲಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ, ಈ ಎರಡು ನಗರಗಳಲ್ಲಿ ನಗರ ಸಾರಿಗೆ ವ್ಯವಸ್ಥೆ ಇರುವುದಿಲ್ಲ, ಇತರೆ ಜಿಲ್ಲೆಗಳಿಗೆ ಪ್ರಯಾಣಿಸಲು ಬಸ್ಸುಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಮದುವೆ ಸಮಾರಂಭಗಳಲ್ಲಿ 20 ಜನರಿಗಿಂತ ಹೆಚ್ಚಿನವರಿಗೆ ಅವಕಾಶ ವಿರುವುದಿಲ್ಲ, ಎಲ್ಲಾ ಕಲ್ಯಾಣ ಮಂಟಪಗಳು, ಧಾರ್ಮಿಕ ಚಟುವಟಿಕಾ ಕೇಂದ್ರಗಳು, ಸಭೆ, ಸಮಾರಂಭ, ಪ್ರತಿಭಟನೆಗಳನ್ನು ಒಂದು ವಾರದ ಅವಧಿಗೆ ನಿಷೇಧಿಸಲಾಗಿದೆ, ಕುಡಿಯುವ ನೀರು, ಪ್ರವಾಹ ಸೇರಿದಂತೆ ಇತ್ಯಾದಿ ತುರ್ತು ಸಂದರ್ಭದಲ್ಲಿ ಮಾತ್ರ ಸಭೆ ನಡೆಸಬಹುದಾಗಿದೆ, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ, ಲಾಕ್‍ಡೌನ್ ಹೊರತು ಪಡಿಸಿ ಜಿಲ್ಲೆಯ ಉಳಿದ ಪ್ರದೇಶಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜನ ಜೀವನಕ್ಕೆ ಅಗತ್ಯವಾದ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದ್ದು, ಉಳಿದ ಅವಧಿಯಲ್ಲಿ ನಿರ್ಬಂಧಿಸಲಾಗಿದೆ ಎಂದವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ. ವೇದಮೂರ್ತಿ ಅವರು ಮಾತನಾಡಿ, ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸುವವರಿಗೆ ದಢೇಸೂಗೂರು ಚೆಕ್‍ಪೋಸ್ಟ್‍ನಲ್ಲಿ ತಪಾಸಣೆಗೊಳಪಡಿಸಲಾಗುವುದು, ಅವರನ್ನು ಕಡ್ಡಾಯವಾಗಿ ಒಂದು ವಾರಗಳ ಕಾಲ ಹೋಂಕ್ವಾರಂಟೈನ್‍ಗೆ ಒಳಪಡಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ದುರುಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ಗೋಷ್ಠಿಯಲ್ಲಿದ್ದರು.

Continue

Related Articles

Leave a Reply

Your email address will not be published. Required fields are marked *

Back to top button
Close
Close